
ನವಲಗುಂದ,ನ೧೬ : ತಾಲೂಕಿನ ಬೆಳವಟಗಿ ಗ್ರಾಮದ ನಿವಾಸಿ ಧಾರವಾಡ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಹಾಗೂ ನವಿಲುತೀರ್ಥದ ಮಲಪ್ರಭಾ ನೀರು ಬಳಕೆದಾರರ ಮಹಾಮಂಡಳದ ಅಧ್ಯಕ್ಷ ಸದುಗೌಡ ಅ. ಪಾಟೀಲ ಅವರಿಗೆ ಸಹಕಾರ ಕ್ಷೇತ್ರ ದಲ್ಲಿ ಸಲ್ಲಿಸಿದ ಗಣನೀಯ ಸೇವೆ ಗುರುತಿಸಿ ರಾಜ್ಯಮಟ್ಟದ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವತಿಯಿಂದ ಆಯೋಜಿಸಿದ್ದ ೭೩ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಸದುಗೌಡ ಪಾಟೀಲ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಸಹಕಾರ ಸಚಿವ ಲಕ್ಷ÷್ಮಣ ಸವದಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಹಾಗೂ ಶಾಸಕರಾದ ಜಿ.ಟಿ. ದೇವೇಗೌಡ, ಕರ್ನಾಟಕ ಸಹಕಾರ ವಸತಿ ಮಹಾಮಂಡಳದ ಅಧ್ಯಕ್ಷರು ಹಾಗೂ ಶಾಸಕರಾದ ಎಸ್.ಟಿ. ಸೋಮಶೇಖರ್, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಎಸ್. ರವಿ ಸೇರಿದಂತೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಪದಾಧಿಕಾರಿಗಳು ಅಧಿಕಾರಿಗಳು ಉಪಸ್ಥಿತರಿದ್ದರು.


















