
ಬೀದರ್:ಏ.12: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ 1 ರಲ್ಲಿ ನಗರದ ಸಾಯಿ ಸ್ಫೂರ್ತಿ ಪದವಿಪೂರ್ವ ಕಾಲೇಜು ಶೇ 91.76 ರಷ್ಟು ಫಲಿತಾಂಶ ಗಳಿಸಿ ಸಾಧನೆಗೈದಿದೆ.
267 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 49 ವಿದ್ಯಾರ್ಥಿಗಳು ಅಗ್ರಶ್ರೇಣಿ, 167 ಪ್ರಥಮ ದರ್ಜೆ ಹಾಗೂ 29 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಅಶ್ವಿನಿ ಸಂತೋಷ್ ರೆಡ್ಡಿ ಶೇ 95.5 ರಷ್ಟು ಅಂಕ ಪಡೆದು ಕಾಲೇಜಿಗೆ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ. ಅಮರ ರಾಜಕುಮಾರ ಶೇ 94.33, ನಂದಿನಿ ರಾಜಕುಮಾರ ಶೇ 93.5, ಸಾಹಿತ್ಯ ಪ್ರಕಾಶ ಶೇ 93.5 ರಷ್ಟು ಅಂಕ ಗಳಿಸಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ರಮ್ಯಾ ರಮೇಶ ಶೇ 93.83 ರಷ್ಟು ಅಂಕ ಪಡೆದು ಕಾಲೇಜಿಗೆ ಟಾಪರ್ ಆಗಿದ್ದಾರೆ. ಪ್ರಮಿತಾ ದತ್ತು ಡೋಂಗ್ರೆ ಶೇ 92.83 ಹಾಗೂ ಕೀರ್ತಿ ಸುಧಾಕರ ಶೇ 89.34 ರಷ್ಟು ಅಂಕ ಗಳಿಸಿದ್ದಾರೆ ಎಂದು ಕಾಲೇಜು ಪ್ರಾಚಾರ್ಯ ಚಂದ್ರಶೇಖರ ಬಿರಾದಾರ ತಿಳಿಸಿದ್ದಾರೆ.
ಕಾಲೇಜು ಆಡಳಿತ ಮಂಡಳಿ, ಉಪನ್ಯಾಸಕರ ಮಾರ್ಗದರ್ಶನ, ಪಾಲಕರ ಸಹಕಾರ ಮತ್ತು ವಿದ್ಯಾರ್ಥಿಗಳ ಕಠಿಣ ಪರಿಶ್ರಮದಿಂದ ಕಾಲೇಜಿಗೆ ಈ ವರ್ಷವೂ ಅತ್ಯುತ್ತಮ ಫಲಿತಾಂಶ ಬಂದಿದೆ ಎಂದು ಹೇಳಿದ್ದಾರೆ.






















