Home ಜಿಲ್ಲೆ ಬೀದರ್ ಸಂತ ಸೇವಾಲಾಲ್‌ರು ಇಡೀ ಸಮಾಜಕ್ಕೆ ಶಾಂತಿಯ ಸಂದೇಶ ಸಾರಿದರು:ಸಚಿವ ರಹೀಂ ಖಾನ್

ಸಂತ ಸೇವಾಲಾಲ್‌ರು ಇಡೀ ಸಮಾಜಕ್ಕೆ ಶಾಂತಿಯ ಸಂದೇಶ ಸಾರಿದರು:ಸಚಿವ ರಹೀಂ ಖಾನ್

ಬೀದರ, ಫೆ.೧೬: ಸಂತ ಸೇವಾಲಾಲ್ ಮಹಾರಾಜರು ಇಡೀ ಸಮಾಜಕ್ಕೆ ಒಳಿತನ್ನು ಬಯಸಿ ಶಾಂತಿಯ ಸಂದೇಶ ಸಾರಿದವರು. ಅವರು ಮಾನವ ಕುಲಕ್ಕೆ ಸುಧಾರಣೆಗೆ ಪ್ರಯತ್ನಿಸಿದವರು ಎಂದು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ಹೇಳಿದರು.
ಅವರು ರವಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮAದಿರದಲ್ಲಿ ಆಯೋಜಿಸಿದ್ದ ಸಂತ ಸೇವಾಲಾಲ್‌ರ ೨೮೭ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಂತ ಸೇವಾಲಾಲರಂತಹ ದಾರ್ಶನಿಕರು ಒಂದು ಜಾತಿಗೆ ಸೀಮಿತರಲ್ಲ. ಅವರು ಬಂಜಾರ ಸಮಾಜ ಸುಧಾರಣೆ ಮತ್ತು ಅಭಿವೃದ್ಧಿಗಾಗಿ ಬಹಳಷ್ಟು ಉತ್ತಮ ಸಂದೇಶ ನೀಡಿದ್ದಾರೆ. ಇವರ ವಚನ, ಸಂದೇಶಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪ್ರತಿಯೊಬ್ಬರೂ ಶಿಕ್ಷಣವಂತರಾದಾಗ ಮಾತ್ರ ಸಮಾಜ ಏಳ್ಗೆ ಹೊಂದಲು ಸಾಧ್ಯ. ಆದ್ದರಿಂದ ಸಮಾಜದ ಜನತೆ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬೀದರನ ಮರ್ಕಲ್ ಸರ್ಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕ ಬಳವಂತರಾವ್ ರಾಥೋಡ್ ಅವರು ಸಂತ ಸೇವಾಲಾಲ್ ಮಹಾರಾಜರ ಕುರಿತು ಅತಿಥಿ ಉಪನ್ಯಾಸನವನ್ನು ನೀಡಿದರು.
ಕಾರ್ಯಕ್ರಮಕ್ಕೂ ಮುಂಚಿತವಾಗಿ ಸಂತ ಸೇವಲಾಲ ಮಾಹಾರಾಜರ ಭಾವಚಿತ್ರ ಮೆರವಣಿಗೆಯು ನಗರದ ಶಿವಾಜಿ ವೃತ್ತ, ಭಗತಸಿಂಗ್ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ ವೃತ್ತ, ಜನರಲ್ ಕರಿಯಪ್ಪ ವೃತ್ತದಿಂದ ಮೂಲಕ ಹಾದು ರಂಗಮAದಿರದವರೆಗೆ ನಡೆಯಿತು.
ಈ ಸಂದರ್ಭದಲ್ಲಿ ಬೀದರ ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಜಿಲ್ಲಾ ಬಂಜಾರಾ ಸಮಾಜದ ಅಧ್ಯಕ್ಷರಾದ ಗೋವರ್ಧನ ರಾಠೋಡ, ಮುಖಂಡರಾದ ಬಸವರಾಜ ಪವಾರ, ಮಾಣಿಕರಾವ ಪವಾರ, ವೀರಶೆಟ್ಟಿ ರಾಠೋಡ, ಗೋಪಾಲಸಿಂಗ ರಾಠೋಡ, ಕೀಶನರಾವ ರಾಠೋಡ ಸೇರಿದಮತೆ ಇತರರು ಉಪಸ್ಥಿತರಿದ್ದರು.