
ಬೀದರ್: ಚಿತ್ರಕಲಾ ಕ್ಷೇತ್ರದಲ್ಲಿ ತಮ್ಮದೇ ಆದ ಕಲಾ ಅಭಿವ್ಯಕ್ತಿ ಹಾಗೂ ನಿರಂತರ ಸಾಧನೆಯ ಮೂಲಕ ಗುರುತಿಸಿಕೊಂಡಿರುವ ಬೀದರ್ನ ಕಲಾವಿದ ಸಂದೀಪ್ ಸಜ್ಜನ್ ಶೆಟ್ಟಿ ಅವರು ಕರ್ನಾಟಕ ಲಲಿತಕಲಾ ಅಕಾಡೆಮಿಯ 2025ನೇ ಸಾಲಿನ 53ನೇ ವಾರ್ಷಿಕ ಚಿತ್ರಕಲಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.
2026ರ ಅಕ್ಟೋಬರ್ 30ರಂದು ಗದಗದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗದಗದ ತೋಂಟದಾರ್ಯ ಸಂಸ್ಥಾನದ ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಪ.ಸ. ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಂದೀಪ್ ಸಜ್ಜನ್ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಚಿತ್ರಕಲಾ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಕಲಾ ಶೈಲಿ, ಸೃಜನಶೀಲತೆ ಹಾಗೂ ನಿರಂತರ ಪರಿಶ್ರಮದಿಂದ ಸಾಧನೆ ಮಾಡಿರುವ ಸಂದೀಪ್ ಅವರ ಆಯ್ಕೆಯು ಬೀದರ್ ಜಿಲ್ಲೆಯ ಕಲಾ ಕ್ಷೇತ್ರಕ್ಕೆ ಹೆಮ್ಮೆಯ ಸಂಗತಿಯಾಗಿದೆ.
ಅವರ ಈ ಸಾಧನೆಗೆ ಜಿಲ್ಲೆಯ ಕಲಾವಿದರು, ಕಲಾಭಿಮಾನಿಗಳು, ಗಣ್ಯರು ಹಾಗೂ ಸ್ನೇಹಿತರು ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಕಲಾ ಸಾಧನೆಗಳನ್ನು ಮಾಡುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.




















