Home ಜಿಲ್ಲೆ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಮಾರ್ಕಬ್ಬಿನಹಳ್ಳಿ ವಿದ್ಯಾರ್ಥಿ ಸಂಗಮೇಶ ಆಯ್ಕೆ

ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಮಾರ್ಕಬ್ಬಿನಹಳ್ಳಿ ವಿದ್ಯಾರ್ಥಿ ಸಂಗಮೇಶ ಆಯ್ಕೆ

ಹೂ ಹಿಪ್ಪರಗಿ :ದೇವರಹಿಪ್ಪರಗಿ ತಾಲ್ಲೂಕಿನ ಮಾರ್ಕಬ್ಬಿನಹಳ್ಳಿ ಗ್ರಾಮದ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಯಾದ ಕುಮಾರ್ ಸಂಗಮೇಶ ಬಸಂತಪ್ಪ ಬಾಬಾನಗರ ಇವರು ವಾಲಿಬಾಲ್ ಕ್ರೀಡೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿ ಗ್ರಾಮೀಣ ಭಾಗದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಸಂಗಮೇಶ ಬಾಬಾನಗರ ರವರು ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಇತ್ತೀಚೆಗೆ ನಡೆದ ವಿಭಾಗ ಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.ವಿಭಾಗ ಮಟ್ಟದ ವಾಲಿಬಾಲ ಸ್ಪರ್ಧೆಯಲ್ಲಿ ಮಾರ್ಕಬ್ಬಿನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ವಿಜಯಪುರ ಜಿಲ್ಲೆಯಿಂದ ವಿಭಾಗ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಮುಡಿಗೇರಿಸಿಕೊಂಡಿದ್ದಾರೆ.
ವಿಭಾಗ ಮಟ್ಟದ ಈ ತೀವ್ರ ಪೈಪೆÇೀಟಿಯ ಸ್ಪರ್ಧೆಯಲ್ಲಿ ಶಾಲೆಯ ವಿದ್ಯಾರ್ಥಿಗಳು ತಮ್ಮ ಅದ್ಭುತ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ಇಡೀ ವಿಜಯಪುರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.ಶಾಲಾ ಮುಖ್ಯೋಪಾಧ್ಯಯರು, ಶಿಕ್ಷಕರು ಗ್ರಾಮಸ್ಥರು ತೀವ್ರ ಸಂತಸ ವ್ಯಕ್ತಪಡಿಸಿದ್ದು, ವಿಜೇತ ವಿದ್ಯಾರ್ಥಿಗಳನ್ನು ಜೈಕಾರ ಹಾಕಿ ಸನ್ಮಾನಿಸಿದ್ದಾರೆ.

ಗ್ರಾಮಸ್ಥರು ಹಾಗೂ ಶಾಲಾ ಮಂಡಳಿ ಹರ್ಷ:
ಗ್ರಾಮೀಣ ಭಾಗದ, ಕಠಿಣ ಪರಿಶ್ರಮದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ಸಂಗಮೇಶ ಸಾಧನೆಗೆ ಇಡೀ ಮಾರ್ಕಬ್ಬಿನಹಳ್ಳಿ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.
ಸಂಗಮೇಶ ಮತ್ತು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳ ಈ ಮಹತ್ತರ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರು, ದೈಹಿಕ ಶಿಕ್ಷಣ ಶಿಕ್ಷಕರು, ಸಹ ಶಿಕ್ಷಕ ವೃಂದ, ಎಸ್‍ಡಿಎಂಸಿ ಪದಾಧಿಕಾರಿಗಳು ಹಾಗೂ ಮಾರ್ಕಬ್ಬಿನಹಳ್ಳಿ ಗ್ರಾಮಸ್ಥರು ಹಾಗೂ ತರಬೇತಿದಾರರಾದ ನಿಸಾರ್ ಅಹ್ಮದ್ ಬೀಳಗಿ,ಮಲ್ಲಪ್ಪ ಉಕ್ಕಲಿ ಹಾಗೂ ಭೀಮ್ ಆರ್ಮಿ ಸಂವಿಧಾನ ರಕ್ಷಕ ದಳ ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕರಾದ ಮಹಾಂತೇಶ ಹಾದಿಮನಿ ಕೂಡ ಹಾರ್ದಿಕವಾಗಿ ಅಭಿನಂದಿಸಿದ್ದಾರೆ. ಮುಂಬರುವ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಿ, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಲಿ ಎಂದು ಎಲ್ಲರೂ ಶುಭ ಹಾರೈಸಿದ್ದಾರೆ.