
ಸಂಜೆವಾಣಿ ವಾರ್ತ
ಹುಮನಾಬಾದ:ಜೂ.೧೭: ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷರಾಗಿ ಹಿರಿಯ ವರದಿಗಾರ ಸಂಜೀವಕುಮಾರ ಜುನ್ನಾ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಗುಂಡು ಅತಿವಾಳ ಆಯ್ಕೆಗೊಂಡಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆನಂದ ದೇವಪ್ಪ ಅವರ ನೇತೃತ್ವದಲ್ಲಿ ಪದಾಧಿಕಾರಿಗಳ ಆಯ್ಕೆ ಎಲ್ಲರ ಸಮ್ಮೂಖದಲ್ಲಿ ನಡೆಸಿ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿ ಆಯ್ಕೆ ಘೋಶಿಸಲಾಯಿತು. ನಂತರ ಆಯ್ಕೆಗೊಂಡ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿ ಅವರಿಗೆ ಸನ್ಮಾನಿಸಿದ ಜಿಲ್ಲಾಧ್ಯಕ್ಷ ಆನಂದ ದೇವಪ್ಪ ಮಾತನಾಡಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಪೃಥ್ವಿರಾಜ್ ಎಸ್, ಕಾರ್ಯದರ್ಶಿ ಸಂತೋಷ ಚೆಟ್ಟಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ದುರ್ಯೋಧನ ಹುಗಾರ, ಶ್ರೀಕಾಂತ ಮಠಪತಿ, ಸದಸ್ಯರಾದ ಶೈಲೇಂದ್ರ ಕಾವಡಿ, ವೆಂಕಟ ಜಾಧವ, ಪ್ರಾಶಾಂತ ಹೊಸಮನಿ, ಕಾಶಿನಾಥ ಜಕ್ಕಾ, ಸೈಯದ ರಿಜ್ವಾನ, ಸಜೀಶ ಲಂಬೇನೋರ, ಶಿವಶರಣ ಚಾಂಗಲೇರಿ, ಮಲ್ಲು ರೆಡ್ಡಿ ಉಪಸ್ಥಿತರಿದ್ದರು.
—-+
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸದಾ ಪತ್ರಕರ್ತರ ಹಿತಕ್ಕಾಗಿ ಕಾರ್ಯನಿರ್ವಹಿಸುತ್ತಿದ್ದು, ಸಂಘದ ವಿರುದ್ಧ ಯಾವುದೇ ಚಟುವಟಿಕೆಗಳನ್ನು ನಡೆಸದೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ನೂತನ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪತ್ರಕರ್ತರ ಹಿತಾಸಕ್ತಿ ರಕ್ಷಣೆಗೆ ಮುಂದಾಗಬೇಕು ಮತ್ತು ಸಂಘದ ನಿಯಮಾನುಸಾರ ಕಾರ್ಯನಿರ್ವಹಿಸಬೇಕು.
- ಆನಂದ ದೇವಪ್ಪ
ಜಿಲ್ಲಾಧ್ಯಕ್ಷ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೀದರ.
ಪತ್ರಕರ್ತರ ಸಂಘದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಎಲ್ಲ ಹಿರಿಯರು, ಪದಾಧಿಕಾರಿಗಳು ಹಾಗೂ ಸದಸ್ಯರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಸಂಘದ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪತ್ರಕರ್ತರ ಹಕ್ಕುಗಳ ರಕ್ಷಣೆ, ಸಮಸ್ಯೆಗಳ ಪರಿಹಾರ ಹಾಗೂ ಪತ್ರಕರ್ತರ ಕಲ್ಯಾಣಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಲು ಶ್ರಮಿಸಲಾಗುವುದು.
- ಸಂಜೀವಕುಮಾರ ಜುನ್ನಾ
ನೂತನ ಅಧ್ಯಕ್ಷರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಹುಮನಾಬಾದ ತಾಲೂಕು ಘಟಕ.



























