Home ಜಿಲ್ಲೆ ಸಸಿ ನೆಡುವಿಕೆ, ಪ್ರಬಂಧ ಹಾಗೂ ರಸಪ್ರಶ್ನೆ ಸ್ಪರ್ಧೆ ಆಯೋಜನೆ: ಮಲ್ಲಿಕಾರ್ಜುನ ಮೇಟಿ

ಸಸಿ ನೆಡುವಿಕೆ, ಪ್ರಬಂಧ ಹಾಗೂ ರಸಪ್ರಶ್ನೆ ಸ್ಪರ್ಧೆ ಆಯೋಜನೆ: ಮಲ್ಲಿಕಾರ್ಜುನ ಮೇಟಿ

ಯಾದಗಿರಿ:ಜೂ.೧: ಬಿಸಿಲಿನ ನಾಡು ಎಂದೇ ಖ್ಯಾತಿ ಪಡೆದಿರುವ ಈ ಭಾಗದ ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆ ಕುರಿತು ಅರಿವು ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ಜೂನ್ ೫ರಂದು ನಡೆಯಲಿರುವ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಡಿಡಿಯು ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಮಲ್ಲಿಕಾರ್ಜುನ ಮೇಟಿ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾದಗಿರಿ, ಶಹಾಪುರ, ಕಲಬುರಗಿ, ದೋರನಹಳ್ಳಿ, ವಡಗೇರಾ ಹಾಗೂ ಸೈದಾಪುರದಲ್ಲಿರುವ ಡಿಡಿಯು ಶಾಲೆಗಳಲ್ಲಿ ಪ್ರಬಂಧ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ ಹಾಗೂ ಅತಿ ಹೆಚ್ಚು ಸಸಿಗಳನ್ನು ನೆಡುವ ವಿಶೇಷ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

೫ರಿಂದ ೧೦ನೇ ತರಗತಿ ವಿದ್ಯಾರ್ಥಿಗಳು ಈ ಸ್ಪರ್ಧೆಗಳಲ್ಲಿ ಭಾಗವಹಿಸಬಹುದಾಗಿದ್ದು, ಪ್ರತಿ ಶಾಲೆಯಿಂದ ಕನಿಷ್ಠ ಐದು ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಪರಿಸರದ ಮಹತ್ವ, ಹಸಿರು ಸಂರಕ್ಷಣೆ ಮತ್ತು ಪ್ರಕೃತಿ ಪ್ರೇಮವನ್ನು ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಸಸಿ ನೆಡುವಿಕೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ?೨,೫೦೦ ಹಾಗೂ ದ್ವಿತೀಯ ಬಹುಮಾನ ?೧,೧೦೦, ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ?೨,೫೦೦ ಹಾಗೂ ದ್ವಿತೀಯ ಬಹುಮಾನ ?೧,೧೦೦, ರಸಪ್ರಶ್ನೆ ಸ್ಪರ್ಧೆಯಲ್ಲಿಯೂ ಪ್ರಥಮ ಬಹುಮಾನ ?೨,೫೦೦ ಹಾಗೂ ದ್ವಿತೀಯ ಬಹುಮಾನ ?೧,೧೦೦ ನಿಗದಿಪಡಿಸಲಾಗಿದೆ ಎಂದು ವಿವರಿಸಿದರು.

ಸಸಿ ನೆಡುವಿಕೆ ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ತಾವು ನೆಟ್ಟ ಸಸಿಯ ಜಿಪಿಎಸ್ ಮಾಹಿತಿಯೊಂದಿಗೆ ಭಾವಚಿತ್ರವನ್ನು ತಮ್ಮ ಶಾಲೆಯ ವಾಟ್ಸಾಪ್ ಸಂಖ್ಯೆಗೆ ಕಳುಹಿಸಬೇಕು. ಸಂಸ್ಥೆಯ ಅಧ್ಯಕ್ಷ ಡಾ. ಭೀಮಣ್ಣ ಮೇಟಿ ಅವರ ಮಾರ್ಗದರ್ಶನದಂತೆ ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಮತ್ತು ಹಸಿರು ಸಂರಕ್ಷಣೆಯ ಮಹತ್ವದ ಕುರಿತು ಅರಿವು ಮೂಡಿಸಲು ಈ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಮೇಟಿ ತಿಳಿಸಿದರು.

ಹೆಚ್ಚಿನ ಮಾಹಿತಿಗಾಗಿ ಯಾದಗಿರಿ – ೯೯೦೨೦೩೫೭೬೫, ಶಹಾಪುರ – ೯೬೧೧೮೩೯೫೨೨, ದೋರನಹಳ್ಳಿ – ೯೧೦೮೩೯೧೯೬೯, ವಡಗೇರಾ – ೯೯೭೨೦೧೨೦೬೬, ಕಲಬುರಗಿ – ೯೯೪೫೦೬೦೫೬೯ ಹಾಗೂ ಸೈದಾಪುರ – ೯೭೩೧೨೭೬೪೫೬ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದಾಗಿದೆ.

ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಂಸ್ಥೆಯ ಬೋಧಕರಾದ ಬಬೀನ್ ರಾಜ್, ಗೋಪಾಲಕೃಷ್ಣ, ವೆಂಕಟೇಶ ಪೂಜಾರಿ ಹಾಗೂ ರಾಜಶೇಖರ ಹಾದಿಮನಿ ಉಪಸ್ಥಿತರಿದ್ದರು