
ಕಲಬುರಗಿ : ಫೆ.14:ಭಾರತದ ಸ್ವಾತಂತ್ರ್ಯ ಹೋರಾಟಗಾರ್ತಿ, ಕವಯತ್ರಿ ಮತ್ತು ರಾಜಕೀಯ ನಾಯಕಿ. ಮಹಾತ್ಮಾ ಗಾಂಧಿಯವರಿಂದ “ಭಾರತದ ಕೋಗಿಲೆ” ಎಂದು ಕರೆಯಲ್ಪಟ್ಟ ಸರೋಜಿನಿ ನಾಯ್ಡು ಅವರ ಕೊಡುಗೆ ಅನನ್ಯವಾಗಿದೆ ಎಂದು ಉಪನ್ಯಾಸಕ ಎಚ್.ಬಿ.ಪಾಟೀಲ್ ಹೇಳಿದರು.
ನಗರದ ಆಳಂದ ರಸ್ತೆಯ ಸಂತೋಷ ಕಾಲನಿ ಕ್ರಾಸ್ ಸಮೀಪದ ‘ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿ’ಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಶುಕ್ರವಾರ ಜರುಗಿದ ‘ಸರೋಜಿನಿ ನಾಯ್ಡುರವರ ಜನ್ಮದಿನಾಚರಣೆ-ರಾಷ್ಟ್ರೀಯ ಮಹಿಳಾ ದಿನಾಚರಣೆ’ಯಲ್ಲಿ ಭಾವಚಿತ್ರಕ್ಕೆ ಪುಸ್ಪನಮನಗಳನ್ನು ಸಲ್ಲಿಸಿ, ಅವರು ಮಾತನಾಡುತ್ತಿದ್ದರು.
ನಾಯ್ಡುರವರು ಕಾಂಗ್ರೆಸ್‍ನ ಮೊದಲ ಭಾರತೀಯ ಮಹಿಳಾ ಅಧ್ಯಕ್ಷೆ ಮತ್ತು ಉತ್ತರ ಪ್ರದೇಶದ ಮೊದಲ ಮಹಿಳಾ ರಾಜ್ಯಪಾಲರಾಗಿದ್ದರು. ಅವರ ಜನ್ಮದಿನವನ್ನು ರಾಷ್ಟ್ರೀಯ ಮಹಿಳಾ ದಿನವಾಗಿ ಆಚರಿಸಲಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ದತ್ತು ಹಡಪದ, ಬಳಗದ ಗೌರವ ಸಲಹೆಗಾರ ಶಿವಯೋಗೆಪ್ಪಾ ಎಸ್. ಬಿರಾದಾರ ಹಾಗೂ ವಿದ್ಯಾರ್ಥಿಗಳು ಇದ್ದರು.



























