
ಜಮಖಂಡಿ: ಜಮೀನಿನಲ್ಲಿ ಅಳವಡಿಸಿದ್ದ ವಿದ್ಯುತ್ ಪರಿವರ್ತಕದ (ಟಿಸಿ) ಕೆಬಲ್ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಸಾವಳಗಿ ಪೆÇಲೀಸರು ಯಶಸ್ವಿಯಾಗಿದ್ದಾರೆ. ಕಳುವಾಗಿದ್ದ 1.61 ಲಕ್ಷ ಮೌಲ್ಯದ 1060 ಮೀಟರ್ ಕೆಬಲ್ ವಶಪಡಿಸಿಕೊಳ್ಳುವಲ್ಲಿ ಪೆÇಲೀಸ್ ತಂಡ ಯಶಸ್ವಿಯಾಗಿದೆ.
ಜಮಖಂಡಿ ತಾಲ್ಲೂಕಿನ ಬಿದರಿ ಗ್ರಾಮದಲ್ಲಿ 2026ರ ಸೆಪ್ಟೆಂಬರ್ 1ರ ರಾತ್ರಿ 9 ಗಂಟೆಯಿಂದ ಸೆಪ್ಟೆಂಬರ್ 2ರ ಬೆಳಗ್ಗೆ 9 ಗಂಟೆಯ ನಡುವಿನ ಅವಧಿಯಲ್ಲಿ ಈ ಕಳ್ಳತನ ನಡೆದಿತ್ತು. ಈ ಕುರಿತು ಸಾವಳಗಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೆÇಲೀಸರು ತನಿಖೆ ಕೈಗೊಂಡಿದ್ದರು.
ಪ್ರಕರಣದ ತನಿಖೆ ನಡೆಸಿದ ಪಿಎಸ್ಐ ಅಪ್ಪಣ್ಣ ಐಗಳಿ ನೇತೃತ್ವದ ಪೆÇಲೀಸ್ ತಂಡ ಆರೋಪಿತನನ್ನು ಪತ್ತೆಹಚ್ಚಿ, ಕಳುವಾಗಿದ್ದ ಕೆಬಲ್ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ
ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಹೆಚ್ಚುವರಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಎಂ. ಜಗದೀಶ, ಡಿವೈಎಸ್ಪಿ ಸೈಯದ್ ರೋಷನ್ ಜಮೀರ್ ಹಾಗೂ ಸಿಪಿಐ ಮಲ್ಲಪ್ಪ ಮಡ್ಡಿ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.
ಸಾವಳಗಿ ಪೆÇಲೀಸ್ ಠಾಣೆಯ ಎಎಸ್ಐ ಬಿ.ಬಿ. ಯಡವೆ, ಶ್ರೀಶೈಲ ಕೆ. ಜಂಬಗಿ, ಎ.ಎ. ನದಾಫ್, ವಿಶಾಲ ಬಜಂತ್ರಿ ಹಾಗೂ ಶಿವಾನಂದ ಬಜಂತ್ರಿ ಸೇರಿದಂತೆ ಪೆÇಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಕಳ್ಳತನ ಪ್ರಕರಣವನ್ನು ಭೇದಿಸಿ, ಕಳುವಾಗಿದ್ದ ಕೆಬಲ್ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದ ಪೆÇಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯಕ್ಕೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.























