Home ಜಿಲ್ಲೆ ಕಲಬುರಗಿ ಎಸ್‍ಬಿಆರ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಎಸ್‍ಬಿಆರ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಲಬುರಗಿ,ಆ.13: ಇತ್ತೀಚೆಗೆ ಶಾಲಾ ಶಿಕ್ಷಣವತಿಯಿಂದ ನಗರದ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ಬ್ರಹ್ಮಪೂರ ಕ್ಲಸ್ಟರ್‍ದ ನಾರ್ಥಜೋನ್ ತಾಲೂಕ ಮಟ್ಟದ ಶೆಟಲ್ ಬ್ಯಾಟಮಿಂಟನ್ ಕ್ರೀಡಾಕೂಟವನ್ನು ಏರ್ಪಡಿಸಲಾಯಿತು.
ಈ ಕ್ರೀಡಾಕೂಟದಲ್ಲಿ ಶರಣಬಸವೇಶ್ವರ ವಸತಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 14 ವರ್ಷದೊಳಗಿನ ಮತ್ತು 17 ವರ್ಷದೊಳಗಿನ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆಗಿದ್ದಾರೆ.
ಈ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ 9ನೇ ಪೀಠಾಧಿಪತಿ ಪೂಜ್ಯ ದೊಡ್ಡಪ್ಪ ಅಪ್ಪ ಅವರು, ಶರಣಬಸವೇಶ್ವರ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಪೂಜ್ಯ ಮಾತೋಶ್ರೀ ಡಾ. ದಾಕ್ಷಾಯಣಿ ಅವ್ವಾಜಿ ಹಾಗೂ ಸಂಸ್ಥೆಯ ಕಾರ್ಯದರ್ಶಿ ಬಸವರಾಜ ದೇಶಮುಖ ಹಾಗೂ ಪ್ರಾಚಾರ್ಯ ಎನ್.ಎಸ್. ದೇವರಕಲ್ ಅವರು ಈ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.