Home ಕ್ರೈಂ ಸುದ್ದಿಗಳು ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿ : ವಿದ್ಯಾರ್ಥಿಗಳಿಲ್ಲದ್ದರಿಂದ ತಪ್ಪಿದ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿ : ವಿದ್ಯಾರ್ಥಿಗಳಿಲ್ಲದ್ದರಿಂದ ತಪ್ಪಿದ ಅನಾಹುತ

ಜಮಖಂಡಿ:ಜೂ.7:ನಗರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಶಾಲಾ ವಾಹನ ಪಲ್ಟಿಯಾಗಿ ಭಾರಿ ಅನಾಹುತವೊಂದು ತಪ್ಪಿದ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.
ನಗರದ ದೇಸಾಯಿ ವೃತ್ತದ ಪರಶುರಾಮ ಉದ್ಯಾನವನದ ಸಮೀಪ ಈ ಘಟನೆ ಸಂಭವಿಸಿದೆ. ಪಲ್ಟಿಯಾದ ವಾಹನವು ತಾಲೂಕಿನ ಸಿದ್ದಾಪುರ ಗ್ರಾಮದ ಸನದಿ ಇಂಟನ್ರ್ಯಾಷನಲ್ ಸ್ಕೂಲ್‍ಗೆ ಸೇರಿದ ಶಾಲಾ ವಾಹನ ಎಂದು ತಿಳಿದುಬಂದಿದೆ.
ಸಿದ್ದಾಪುರ ಗ್ರಾಮದಿಂದ ಜಮಖಂಡಿ ನಗರಕ್ಕೆ ಆಗಮಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ.
ಘಟನೆಯಲ್ಲಿ ಚಾಲಕ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರನ್ನು ಪ್ರಥಮ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಶಾಲಾ ತರಗತಿಗಳಿಗೆ ರಜೆ ಇದ್ದ ಕಾರಣ ಬಸ್‍ನಲ್ಲಿ ಯಾವುದೇ ವಿದ್ಯಾರ್ಥಿಗಳು ಪ್ರಯಾಣಿಸುತ್ತಿರಲಿಲ್ಲ. ಹೀಗಾಗಿ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದಂತಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಹನ ಪಲ್ಟಿಯಾದ ಸುದ್ದಿ ತಿಳಿಯುತ್ತಿದ್ದಂತೆಯೇ ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.