Home ಜಿಲ್ಲೆ ಶ್ರೀ ವಿದ್ಯಾರಣ್ಯ ಪ್ರೌಢ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಸಂಭ್ರಮ

ಶ್ರೀ ವಿದ್ಯಾರಣ್ಯ ಪ್ರೌಢ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಸಂಭ್ರಮ

ಬೀದರ್,ಜೂ ೩: ನಗರದ ಸರಸ್ವತಿ ಶಿಕ್ಷಣ ವಿಕಾಸ ಸಮಿತಿ ಸಂಚಾಲಿತ ಶ್ರೀ ವಿದ್ಯಾರಣ್ಯ ಪ್ರೌಢ ಶಾಲೆಯಲ್ಲಿ ೨೦೨೬-೨೭ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ಸೋಮವಾರ ಸಂಭ್ರಮದಿAದ ಆಚರಿಸಲಾಯಿತು.
ಬೆಳಿಗ್ಗೆ ಆರಂಭವಾದ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ದ್ವಾರದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಪುಷ್ಪವರ್ಷಗೈದು ಸ್ವಾಗತ ಕೋರಲಾಯಿತು.ಶಾಲೆಯ ಮುಖ್ಯಗುರುಗಳಾದ ಪ್ರತಿಭಾ ಚಾಮಾ ಅವರು ವಿದ್ಯಾರ್ಥಿಗಳು ಶ್ರದ್ಧೆ, ಶಿಸ್ತು, ಆತ್ಮವಿಶ್ವಾಸ ಮತ್ತು ಪರಿಶ್ರಮದಿಂದ ಹೊಸ ಶೈಕ್ಷಣಿಕ ವರ್ಷವನ್ನು ಆರಂಭಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಪ್ರೊ. ಎಸ್.ಬಿ. ಸಜ್ಜನಶೆಟ್ಟಿ ಮಾತನಾಡಿ, ಪ್ರೌಢ ಹಂತವೇ ಮಕ್ಕಳ ಭವಿಷ್ಯದ ಭದ್ರಬುನಾದಿಯಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಅಡಗಿರುವ ಸಾಮರ್ಥ್ಯ ಮತ್ತು ದೈವಿಕ ಶಕ್ತಿಯನ್ನು ಗುರುತಿಸಿ ಜೀವನದ ಗುರಿ ಸಾಧಿಸುವಂತೆ ಸಲಹೆ ನೀಡಿದರು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಪ್ರತಿನಿಧಿಯಾಗಿ ೧೦ನೇ ತರಗತಿಯ ವಿದ್ಯಾರ್ಥಿ ಆದಿತ್ಯ ಅನಿಲಕುಮಾರ ಉಪಸ್ಥಿತರಿದ್ದರು.ರಿತಿಕಾ ಸ್ವಾಗತ ಹಾಗೂ ಪರಿಚಯ ನೆರವೇರಿಸಿದರೆ, ಪುನಿತ್ ವೈಯಕ್ತಿಕ ಗೀತೆ ಹಾಡಿದರು. ಆದಿತ್ಯ ವಂದನಾರ್ಪಣೆ ಸಲ್ಲಿಸಿದರೆ, ಸುಪ್ರಿಯಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಅಂತ್ಯದಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕಗಳನ್ನು ವಿತರಿಸಲಾಯಿತು.