
ಅಥಣಿ :ಜೂ.೨: ಕ್ಷೇತ್ರದ ಅಭಿವೃದ್ಧಿಯಲ್ಲಿ ಶಾಸಕ ಲಕ್ಷ್ಮಣ ಸವದಿ ಅವರು ವಿಶೇಷವಾಗಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದ್ದು. ಸರಕಾರಿ ಶಾಲೆ ಎಂದರೆ ಆಲಸ್ಯ ಬೇಡ. ಇಂದಿನ ಸಮಾಜದಲ್ಲಿ ಉತ್ತಮ ಸಾಧನೆ ಮಾಡಿರುವ ಬಹತೇಕ ಮಕ್ಕಳು ಕನ್ನಡ ಸರಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳೇ ಆಗಿದ್ದಾರೆ ಎಂಬುದು ಹೆಮ್ಮೆಯ ವಿಚಾರ ಎಂದು ಪುರಸಭೆ ಅಧ್ಯಕ್ಷೆ ಶಿವಲೀಲಾ ಬುಟಾಳಿ ಹೇಳಿದರು.
ಅವರು ಪಟ್ಟಣದ ವಿಕ್ರಮಪೂರ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಮತ್ತು ಉನ್ನತೀಕರಿಸಿದ ಪ್ರೌಢಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡ ೨೦೨೬-೨೭ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಮತ್ತು ದಾಖಲಾತಿ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಸರ್ಕಾರಿ ಶಾಲೆಗೆ ನಮ್ಮ ಮಕ್ಕಳನ್ನು ಸೇರಿಸುವುದು ನಮ್ಮ ಜವಾಬ್ದಾರಿಯಾಗಿದೆ. ಸರ್ಕಾರ ಮಕ್ಕಳ ವಿದ್ಯಾಭ್ಯಾಸಕ್ಕೆ ಕೊಟ್ಯಂತರ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ. ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು. ಎಲ್ಲ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು ಎಂದು ಕರೆ ನೀಡಿದರು.
ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಆರ್ ಮುಂಜೆ ಮಾತನಾಡಿ ಈ ಶಾಲೆಯಲ್ಲಿ ೧ನೇ ತರಗತಿಯಿಂದ ೧೦ ನೇ ತರಗತಿವರೆಗೆ ಇಂಗ್ಲಿಷ್ ಮತ್ತು ಕನ್ನಡ ಭಾಷೆಯಲ್ಲಿ ಬೋಧನೆ ಮಾಡಲಾಗುತ್ತಿದ್ದು. ಸುಸಜ್ಜಿತ ವಿಜ್ಞಾನ ಪ್ರಯೋಗಾಲಯ ಗ್ರಂಥಾಲಯ ಉಚಿತ ಆರೋಗ್ಯ ಸೇವೆ ಉಚಿತ ಪಠ್ಯಪುಸ್ತಕ ಸಮವಸ್ತ್ರ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್ ಡಿಎಂಸಿ) ಅಧ್ಯಕ್ಷ ರಾಕೇಶ ಮೈಗೂರ ಮಾತನಾಡಿ ನಮ್ಮದು ಸರ್ಕಾರಿ ಶಾಲೆ ಆದರೂ ಖಾಸಗಿ ಶಾಲೆಗಳಿಂದ ಹೆಚ್ಚಿನ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು ಪ್ರತಿ ತಿಂಗಳು ಪಾಲಕ ಹಾಗೂ ಶಿಕ್ಷಕರ ಸಭೆ ಮಕ್ಕಳ ಕಲಿಕಾ ಪ್ರಗತಿಯ ನಿರಂತರ ಮೌಲ್ಯಮಾಪನ ಎಸ್ ಡಿ ಎಂ ಸಿ ಸಭೆ ಆಯೋಜಿಸಲಾಗುತ್ತಿದ್ದು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪ್ರಾಜೆಕ್ಟ್ ಆಧಾರಿತ ಕಲಿಕೆ ಹಾಗೂ ಸಾಂಸ್ಕೃತಿಕ ಕ್ರೀಡಾ ಚಟುವಟಿಕೆಗಳಿಗೆ ವಿಶೇಷ ಒತ್ತು ನೀಡಲಾಗುವುದು ಹಾಗೂ ಖಾಸಗಿ ಶಾಲೆಗಿಂತ ಯಾವುದರಲ್ಲೂ ಕಡಿಮೆ ಇಲ್ಲದ ಸೌಲಭ್ಯಗಳು ಇಲ್ಲಿವೆ ಎಂದು ಹೇಳಿದರು.
ಪುರಸಭೆ ಉಪಾಧ್ಯಕ್ಷ ಭುವನೇಶ್ವರಿ ಯಕ್ಕಂಚಿ ಮಾತನಾಡಿದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ರಾಜಶೇಖರ ಗುಡೊಡಗಿ, ರಿಯಾಜ್ ಸನದಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪೂರ, ಕ್ಷೇತ್ರ ಸಮನ್ವಯಾಧಿಕಾರಿ ಗೌಡಪ್ಪ ಖೋತ, ಮಧ್ಯಾಹ್ನ ಬಿಸಿಊಟ ಯೋಜನೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ನಾಮಧಾರ, ಶಾಲೆಯ ಮುಖ್ಯೋಪಾಧ್ಯಾಯ ಡಿ ಸ್ ಬಸರಗಿ, ಶಿಕ್ಷಕರಾದ ಡಿ ಎಸ್ ಗುಡದಿನ್ನಿ, ವಿ ಎಸ್ ವಾಘಮೊಡೆ, ಡಿ ಎ ಬರಡಗಿ, ಎಸ್ ಎಸ್ ಮುಗಳಖೋಡ, ಜಿ ಎನ್ ಕುಂಬಾರ, ಎಫ್ ಎಮ್ ಕೋರ್ಬು, ಲಕ್ಷ್ಮಿ ನೀಡೊಣಿ, ಎಸ್ ಡಿ ಎಮ್ ಸಿ ಸದಸ್ಯರಾದ ನಾಗವ್ವ ಸುರವಿ, ಬೀಬಿಆಯಿಶಾ ಮಮದಾಪೂರ, ರೇಣುಕಾ ಬಿರಡಿ, ಸೇರಿದಂತೆ ಪಾಲಕರು ವಿದ್ಯಾರ್ಥಿಗಳು ಭಾಗವಹಿಸಿದರು.
#
ಬೇಸಿಗೆ ರಜೆಯ ನಂತರ ತಾಲೂಕಿನಾದ್ಯಂತ ಶಾಲೆಗಳು ಅದ್ಧೂರಿಯಾಗಿ ಆರಂಭಗೊAಡಿದ್ದು, ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿAದ ಆಚರಿಸಲಾಗುತ್ತಿದೆ. ತಳಿರು-ತೋರಣಗಳಿಂದ ಅಲಂಕೃತಗೊAಡ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ, ತಿಲಕವಿಟ್ಟು ಸಿಹಿ ಹಂಚಿ ಶಿಕ್ಷಕರು ಮತ್ತು ಎಸ್‌ಡಿಎಂಸಿ ಸದಸ್ಯರು ಆತ್ಮೀಯವಾಗಿ ಬರಮಾಡಿಕೊಳ್ಳುತ್ತಿದ್ದಾರೆ. ಮೊದಲ ದಿನ ಶಾಲೆಗೆ ಬರುವ ಹೊಸ ಮಕ್ಕಳಿಗೆ ಮತ್ತು ಹಳೆಯ ವಿದ್ಯಾರ್ಥಿಗಳಿಗೆ ಹೂವಿನ ಮಳೆಗರೆದು, ಆರತಿ ಬೆಳಗಿ ಸ್ವಾಗತಿಸಲಾಗುತ್ತದೆ. ಪಠ್ಯಪುಸ್ತಕ ವಿತರಣೆ : ಮಕ್ಕಳಿಗೆ ಮೊದಲ ದಿನವೇ ಉಚಿತ ಸಮವಸ್ತ್ರ, ನೋಟ್‌ಬುಕ್ ಮತ್ತು ಪಠ್ಯಪುಸ್ತಕಗಳನ್ನು ವಿತರಿಸಲಾಗುತ್ತದೆ.






















