Home ಜಿಲ್ಲೆ ಕಲಬುರಗಿ ವೈಜ್ಞಾನಿಕ ಚಿಂತನೆ ಅಗತ್ಯ : ಪ್ರೊ.ವಾಮನ ಗಾಜ್ರೆ

ವೈಜ್ಞಾನಿಕ ಚಿಂತನೆ ಅಗತ್ಯ : ಪ್ರೊ.ವಾಮನ ಗಾಜ್ರೆ

ಕಲಬುರಗಿ,ಮೇ.27-ನಗರದ ನೂತನ ವಿದ್ಯಾಲಯ ಪದವಿ ಮಹಾವಿದ್ಯಾಲಯದ ರಸಾಯನಶಾಸ್ತ್ರ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಶನಿವಾರ ವಿಜ್ಞಾನ ಮೇಳವನ್ನು ಆಯೋಜಿಸಲಾಗಿತ್ತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಸೇಡಂ ಸರಕಾರಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಪೆÇ್ರ. ವಾಮನ ಗಾಜ್ರೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಇಂದಿನ ತಂತ್ರಜ್ಞಾನಾಧಾರಿತ ಯುಗದಲ್ಲಿ ಕೇವಲ ಭಾವನಾತ್ಮಕ ಬದುಕಿಗಿಂತ ಪ್ರಾಯೋಗಿಕ ಹಾಗೂ ವೈಚಾರಿಕ ಬದುಕು ಅಗತ್ಯವಾಗಿದ್ದು, ವೈಜ್ಞಾನಿಕ ಚಿಂತನೆ ವ್ಯಕ್ತಿಯ ತಾರ್ಕಿಕ ಸಾಮಥ್ರ್ಯವನ್ನು ವೃದ್ಧಿಸುತ್ತದೆ ಎಂದು ಹೇಳಿದರು.
ವಿದ್ಯಾರ್ಥಿಗಳು ಪ್ರಯೋಗಾತ್ಮಕ ಅಧ್ಯಯನ, ಸಂಶೋಧನಾ ಮನೋವೃತ್ತಿ ಹಾಗೂ ನವೀನ ಆವಿಷ್ಕಾರಗಳತ್ತ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಗೌರವ ಉಪಸ್ಥಿತರಾಗಿ ಮಾತನಾಡಿದ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯರ ಪೆÇ್ರ. ಯು.ಜಿ. ಸರದೇಶಪಾಂಡೆ ಅವರು ಗೃಹ ವಿಜ್ಞಾನ, ಪೌಷ್ಟಿಕಾಂಶ, ಆಹಾರ ಸಂರಕ್ಷಣೆ ಮತ್ತು ಆರೋಗ್ಯ ವಿಜ್ಞಾನಗಳ ಪ್ರಸ್ತುತತೆಯನ್ನು ವಿವರಿಸಿದರು. ಮಹಾವಿದ್ಯಾಲಯದ ನಿರ್ದೇಶಕ ಪೆÇ್ರ. ಗೋವಿಂದ ಪೂಜಾರ್ ಅಧ್ಯಕ್ಷತೆ ವಹಿಸಿದ್ದರು.
ವಿಜ್ಞಾನ ಮೇಳದಲ್ಲಿ ಸುಮಾರು 20 ವಿದ್ಯಾರ್ಥಿಗಳು ವಿವಿಧ ವೈಜ್ಞಾನಿಕ ಮಾದರಿಗಳು, ರಾಸಾಯನಿಕ ಪ್ರತಿಕ್ರಿಯೆಗಳು, ಶಕ್ತಿ ಪರಿವರ್ತನೆ, ಪರಿಸರ ಸಂರಕ್ಷಣೆ, ಜಲಶುದ್ಧೀಕರಣ ಸೇರಿದಂತೆ ಹಲವು ವಿಷಯಾಧಾರಿತ ಪ್ರಯೋಗಗಳನ್ನು ಪ್ರದರ್ಶಿಸಿದರು.
ನೂತನ ವಿದ್ಯಾಲಯ ಸಂಸ್ಥೆಯ ಅಧ್ಯಕ್ಷ ಡಾ.ಗೌತಮ್ ಜಹಗೀರದಾರ ಹಾಗೂ ಸಂಸ್ಥೆಯ ಸದಸ್ಯರು ಮೇಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ವೈಜ್ಞಾನಿಕ ಮಾದರಿಗಳು ಮತ್ತು ಪ್ರಯೋಗಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಜಾಗೃತಿ ಹಾಗೂ ನವೋದ್ಯಮಶೀಲತೆ ಬೆಳೆಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು ಅಭಿಪ್ರಾಯಪಟ್ಟರು. ಮೇಳಕ್ಕೆ ಆಗಮಿಸಿದ್ದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ತಮ್ಮ ಪ್ರಯೋಗಗಳ ವೈಜ್ಞಾನಿಕ ತತ್ವಗಳನ್ನು ವಿವರಿಸಿದರು.
ವಿದ್ಯಾರ್ಥಿಗಳಾದ ಶ್ರೀಕಾರ ಮತ್ತು ಕರಣ್ ವಿಜ್ಞಾನ ಮೇಳದ ಅನುಭವಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕುಮಾರಿ ನಂದಿನಿ ಪ್ರಾರ್ಥನಾ ಗೀತೆ ಹಾಡಿದರು. ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಕಾರ್ಯಕ್ರಮದ ಆಯೋಜಕರಾದ ಡಾ. ಅಶ್ವಿನಿ ಕೆ.ಆರ್. ಕಾರ್ಯಕ್ರಮ ನಿರೂಪಿಸಿದರು. ಪೆÇ್ರ.ಭಾರತಿ ಎಸ್.ಆರ್.ವಂದಿಸಿದರು.