Home ಜಿಲ್ಲೆ ಸಮಾಜ ಕಲ್ಯಾಣ ಇಲಾಖೆಯ ಸ್ತಬ್ದಚಿತ್ರಕ್ಕೆ ದ್ವಿತೀಯ ಸ್ಥಾನ

ಸಮಾಜ ಕಲ್ಯಾಣ ಇಲಾಖೆಯ ಸ್ತಬ್ದಚಿತ್ರಕ್ಕೆ ದ್ವಿತೀಯ ಸ್ಥಾನ

ಗದಗ,ನ೫: ೭೧ ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಇಲಾಖೆಗಳ ಯೋಜನೆಗಳನ್ನು ಒಳಗೊಂಡAತಹ (ರೂಪಕ) ಸ್ತಬ್ದಚಿತ್ರ ಕನ್ನಡ ರಾಜ್ಯೋತ್ಸವ ಮೆರವಣಿಗೆಯಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯು ಪಾಲ್ಗೊಂಡು, ಸ್ತಬ್ದಚಿತ್ರದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಮಾನ್ಯ ಶಾಸಕರಾದ ಡಾ.ಎಚ್.ಕೆ.ಪಾಟೀಲ ಅವರು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಡಾ.ನಂದಾ ಹಣಬರಟ್ಟಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಕುಲ್ ಜೈನ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಮಿಥುನ್ .ಎಚ್. ಎನ್. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ರೀಮತಿ ರಾಧಾ ಮಣ್ಣೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಗಣ್ಯರು, ಕ್ರೆöÊಸ್ ವಸತಿ ಶಾಲೆಗಳ ಚಿತ್ರಕಲಾ ಶಿಕ್ಷಕರು ಹಾಗೂ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.