ನೃತ್ಯ ರಂಗೋಲಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

ಔರಾದ : ಮೇ.24:ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ನೃತ್ಯ ರಂಗೋಲಿ ಸ್ಪರ್ಧೆಗಳಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ಬಹುಮಾನ ಪಡೆದಿದ್ದಾರೆ.

ಜಿಲ್ಲೆಯ ನೌಬಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 50 ವರ್ಷ ತುಂಬಿದ ಸಂದರ್ಭ ನಡೆದ ಸುವರ್ಣ ಮಹೋತ್ಸವದ ಅಂಗವಾಗಿ ನಡೆದ ವಿವಿಧ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದ ಔರಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ನೃತ್ಯದಲ್ಲಿ ಸಾಯಿ ಜಾಧವ ಮತ್ತು ತಂಡದವರು ದ್ವಿತೀಯ ಸ್ಥಾನ, ರಂಗೋಲಿಯಲ್ಲಿ ಮನೀಷಾ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜು ಪ್ರಾಚಾರ್ಯ ಅಂಬಿಕಾದೇವಿ ಕೊತಮೀರ್ ಹಾಗೂ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳು ಹರ್ಷವ್ಯಕ್ತಪಡಿಸಿದ್ದಾರೆ.