ಕಬ್ಬಡ್ಡಿಯಲ್ಲಿ ದ್ವೀತಿಯ ಸ್ಥಾನ

ಕಲಬುರಗಿ:ಸೆ.24:ಇತ್ತೀಚಿಗೆ ಗುಲ್ಬರ್ಗಾ ವಿವಿಯಲ್ಲಿ ನಡೆದ ಕ್ರೀಡಾಕೂಟದಲ್ಲಿ ಆಳಂದನ ವೆಂಕಯ್ಯ ಕೂಸಯ್ಯ ಗುತ್ತೇದಾರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಕಬ್ಬಡ್ಡಿ ಆಟದಲ್ಲಿ ದ್ವೀತಿಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಮಾಜಿ ಶಾಸಕ ಸುಭಾಷ ಗುತ್ತೇದಾರ, ಕಾರ್ಯದರ್ಶಿ ಹರ್ಷಾ ಗುತ್ತೇದಾರ, ಪ್ರಾಚಾರ್ಯ ಕಲ್ಯಾಣಿ ಸಾವಳಗಿ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.