
ಕಲಬುರಗಿ,ನ.7 : ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ, ಭಾರತ ಸರ್ಕಾರ, ಕಲಬುರಗಿ ಜಿಲ್ಲಾ ಆಯೋಜಿಸಿದ ವಿಕಸಿತ ಭಾರತ ಯುವ ಸಂಸತ್ ಭಾಷಣ ಸ್ಪರ್ಧೆಯಲ್ಲಿ ಶರಣಬಸವೇಶ್ವರ ಪದವಿ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿನಿ ಫೈಜಾ ಖಾನಂ ದ್ವಿತೀಯ ಸ್ಥಾನ ಪಡೆದಿದ್ದಾರೆ.
ನಗರದ ಶಾರದವಿವೇಕ ಪದವಿ ಮಹಾವಿದ್ಯಾಲಯದಲ್ಲಿ ಶುಕ್ರವಾರ ನಡೆದ ಸ್ಫರ್ಧೆಯಲ್ಲಿ ವಿದ್ಯಾರ್ಥಿ ಈ ಸಾಧನೆ ಮಾಡಿದ್ದಾರೆ. ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ದಶರಥ ಮೇತ್ರೆ ,ಡಾ.ವಿಜಯಲಕ್ಷ್ಮೀ ಮತ್ತು ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.




















