
ಕಲಬುರಗಿ:ಇತ್ತಿಚೆಗೆ ಸಾರ್ವಜನಿಕ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ರಾಯಚೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕಲಬುರಗಿ ವಿಭಾಗದ ಶೆಟಲ್ ಬ್ಯಾಟ್ಮಿಂಟನ್ ಪಂದ್ಯಾಟದಲ್ಲಿ ಕಲಬುರಗಿ ಜಿಲ್ಲೆಯ ಶರಣಬಸವೇಶ್ವರ ವಸತಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 17 ವರ್ಷದ ವಯೋಮಿತಿ ಬಾಲಕರ ವಿಭಾಗದ ಮೋಹನ್ ಆರ್.ಕೆ. ಅದೇ ರೀತಿಯಾಗಿ 17 ವರ್ಷದ ವಯೋಮಿತಿಯ ಬಾಲಕಿಯರ ವಿಭಾಗದ ಕು. ಅಕ್ಷರಾ ಪಿ. ಮತ್ತು ಸಾತ್ವೀಕಾ ಎನ್.ಆರ್. ಈ ವಿದ್ಯಾರ್ಥಿಗಳು ಮುಂದೆ ನಡೆಯುವ ರಾಜ್ಯಮಟ್ಟದ ಶೆಟಲ್ ಬ್ಯಾಟ್ಮಿಂಟನ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ವಿಜಯದ ಕೀರ್ತಿ ತರುವಲ್ಲಿ ಯಶಸ್ವಿಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕರು ಹಾಗೂ ಸಿಬ್ಬಂಧಿಗಳು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದರು.
ಈ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ 9ನೇ ಪೀಠಾಧಿಪತಿ ಪೂಜ್ಯ ಚಿ. ದೊಡ್ಡಪ್ಪ ಅಪ್ಪ ಅವರು, ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಪೂಜ್ಯ ಮಾತೋಶ್ರೀ ಡಾ. ದಾಕ್ಷಾಯಣಿ ಅವ್ವಾಜಿ ಹಾಗೂ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ. ಬಸವರಾಜ ದೇಶಮುಖ ಹಾಗೂ ಪ್ರಾಚಾರ್ಯರಾದ ಶ್ರೀ. ಎನ್.ಎಸ್. ದೇವರಕಲ್ ಅವರು ಈ ಎಲ್ಲಾ ವಿದ್ಯಾರ್ಥಿಗಳಿಗೆ ಶುಭಾ ಹಾರೈಸಿದರು.





















