
ಕಲಬುರಗಿ,ಸೆ.28-ಜಿಲ್ಲಾ ಮಟ್ಟದ ಕ್ರೀಡಾಕೂಟ 2026-27ನೇ ಸಾಲಿನ ಯು-17 ಕುಸ್ತಿ ವಿಭಾಗದಲ್ಲಿ ಸರಕಾರಿ ಪ್ರೌಢ ಶಾಲೆ ಫರಹತಾಬಾದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಅಗ್ನಿ-72 ಕೆ.ಜಿ. ವಿಭಾಗದಲ್ಲಿ ಫ್ರೀಸ್ಟೈಲ್ & ಗ್ರೀಕೋ ರೋಮನ್ ಸ್ಟೈಲ್ ನಲ್ಲಿ ಪ್ರಥಮ ಸ್ಥಾನ, ಕೆರೆಪ್ಪ-ಗ್ರೀಕೋ ರೋಮನ್ ಸ್ಟೈಲ್ 48 ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರಾಜಶೇಖರ್ ಗೋನಾಯಕ ಹಾಗೂ ಕಲಬುರಗಿ ದಕ್ಷಿಣ ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಬಸವರಾಜ ರಟಕಲ್, ಕಲಬುರಗಿ ಉತ್ತರ ವಲಯ ದೈಹಿಕ ಶಿಕ್ಷಣಾಧಿಕಾರಿ ದಶರಥ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಮುಖ್ಯ ಗುರುಗಳು, ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಸದಸ್ಯರು, ಶಾಲಾ ಸಿಬ್ಬಂದಿ ವರ್ಗ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಅಶೋಕ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.





















