Home ಜಿಲ್ಲೆ ಕಲಬುರಗಿ ಥ್ರೋ ಬಾಲ್ ತಾಲೂಕ ಮಟ್ಟಕ್ಕೆ ಆಯ್ಕೆ

ಥ್ರೋ ಬಾಲ್ ತಾಲೂಕ ಮಟ್ಟಕ್ಕೆ ಆಯ್ಕೆ

ಕಲಬುರಗಿ:ಇತ್ತಿಚೆಗೆ ಶಾಲಾ ಶಿಕ್ಷಣವತಿಯಿಂದ ನಡೆದ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ಬ್ರಹ್ಮಪೂರ ಕ್ಲಸ್ಟರ್‍ದ ಸೆಂಟರ್ ಜೂನ್ ಕ್ರೀಡಾಕೂಟವನ್ನು ಏರ್ಪಡಿಸಲಾಯಿತು. ಈ ಕ್ರೀಡಾಕೂಟದಲ್ಲಿ ಶರಣಬಸವೇಶ್ವರ ವಸತಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಥ್ರೋ ಬಾಲ್ ಕ್ರೀಡೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ತಾಲೂಕ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕ ವೃಂದದವರು ಅಭಿನಂದಿಸಿದರು.
ಈ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ 9ನೇ ಪೀಠಾಧಿಪತಿ ಪೂಜ್ಯ ಚಿ. ದೊಡ್ಡಪ್ಪ ಅಪ್ಪ ಅವರು, ಶರಣಬಸವೇಶ್ವರ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಪೂಜ್ಯ ಮಾತೋಶ್ರೀ ಡಾ. ದಾಕ್ಷಾಯಣಿ ಅವ್ವಾಜಿ ಹಾಗೂ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ. ಬಸವರಾಜ ದೇಶಮುಖ ಹಾಗೂ ಪ್ರಾಚಾರ್ಯರಾದ ಶ್ರೀ. ಎನ್.ಎಸ್. ದೇವರಕಲ್ ಅವರು ಈ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.