Home ಜಿಲ್ಲೆ ಕಲಬುರಗಿ ತಾಲೂಕ ಮಟ್ಟಕ್ಕೆ ಆಯ್ಕೆ

ತಾಲೂಕ ಮಟ್ಟಕ್ಕೆ ಆಯ್ಕೆ

ಕಲಬುರಗಿ,ಆ.13: ಇತ್ತೀ ಚೆಗೆ ಶಾಲಾ ಶಿಕ್ಷಣವತಿಯಿಂದÀ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ಬ್ರಹ್ಮಪೂರ ಕ್ಲಸ್ಟರ್‍ದ ನಾರ್ಥಜೋನ್ ಕ್ರೀಡಾಕೂಟವನ್ನು ಏರ್ಪಡಿಸಲಾಯಿತು. ಈ ಕ್ರೀಡಾಕೂಟದಲ್ಲಿ ಶರಣಬಸವೇಶ್ವರ ವಸತಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ 400ಮೀ. ಓಟ 100ಮೀ. ಓಟ, ಚಕ್ರ ಎಸೆತ ಪ್ರಥಮ, ವಾಲಿಬಾಲ್ ದ್ವಿತೀಯ ಹಾಗೂ ಕಬ್ಬಡ್ಡಿ, ಖೊಖೊ, 400 x 100 ಥ್ರೋಬಾಲ್ ತೃತೀಯ ಸ್ಥಾನ ಪಡೆದು ತಾಲೂಕ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಈ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ 9ನೇ ಪೀಠಾಧಿಪತಿ ಪೂಜ್ಯ ದೊಡ್ಡಪ್ಪ ಅಪ್ಪ ಅವರು, ಶರಣಬಸವೇಶ್ವರ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಪೂಜ್ಯ ಮಾತೋಶ್ರೀ ಡಾ. ದಾಕ್ಷಾಯಣಿ ಅವ್ವಾಜಿ ಹಾಗೂ ಸಂಸ್ಥೆಯ ಕಾರ್ಯದರ್ಶಿ ಬಸವರಾಜ ದೇಶಮುಖ ಹಾಗೂ ಪ್ರಾಚಾರ್ಯ ಎನ್.ಎಸ್. ದೇವರಕಲ್ ಅವರು ಈ ಎಲ್ಲಾ ವಿದ್ಯಾರ್ಥಿಗಳಿಗೆ ಶುಭಾ ಹಾರೈಸಿದರು.