Home ಜಿಲ್ಲೆ ಅಲೆಮಾರಿ, ಅತಿ ಸೂಕ್ಷ್ಮ ಸಮುದಾಯದ ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯರ ಆಯ್ಕೆ

ಅಲೆಮಾರಿ, ಅತಿ ಸೂಕ್ಷ್ಮ ಸಮುದಾಯದ ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯರ ಆಯ್ಕೆ

ಯಾದಗಿರಿ: ಜಿಲ್ಲೆಯಲ್ಲಿ ಅಲೆಮಾರಿ, ಅರೆ ಅಲೆಮಾರಿ ಹಾಗೂ ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಮತ್ತು ಕಲ್ಯಾಣಕ್ಕಾಗಿ ರಚಿಸಲಾಗಿರುವ ಜಿಲ್ಲಾ ಅನುಷ್ಠಾನ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಚನ್ನಬಸಪ್ಪ, ಅಪರ ಜಿಲ್ಲಾಧಿಕಾರಿ ರಮೇಶ್ ಕೋಲಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಅವರ ಸಮ್ಮುಖದಲ್ಲಿ ಸಮಿತಿ ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆಯಿತು.
ಆಯ್ಕೆಯಾದ ಸದಸ್ಯರು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರನ್ನು ಭೇಟಿ ಮಾಡಿ ಸನ್ಮಾನಿಸಿ ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಸಮಾಜಗಳ ಮುಖಂಡರು ಹಾಗೂ ಸಮುದಾಯದ ಪ್ರಮುಖರು ಭಾಗವಹಿಸಿದ್ದರು.
ಅಖಿಲ ಕರ್ನಾಟಕ ಚೆನ್ನದಾಸರ ಪರಿಶಿಷ್ಟ ಜಾತಿ ಮಹಾಸಭಾದ ಜಿಲ್ಲಾ ಗೌರವಾಧ್ಯಕ್ಷ ವೆಂಕೋಬ ಕಟ್ಟಿಮನಿ ಕಂಚಗಾರಹಳ್ಳಿ ಅವರು ಆಯ್ಕೆಯಾದ ಸದಸ್ಯರನ್ನು ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ವಿಜಯಲಕ್ಷ್ಮಿ ರವಿಕುಮಾರ್ ತಡಿಬಿಡಿ, ವೆಂಕೋಬ ಬಾಲಪ್ಪ ಟೀವಾಡಗೇರ, ಆಂಜನೇಯ ಬುಡಗ ಜಂಗಮ ಯಾದಗಿರಿ, ದೇವೇಂದ್ರ ಹೊಸಮನಿ ರಾಮಸಂದ್ರ, ಕೃಷ್ಣ ಗಾಜರಕೋಟ್, ರವಿಕುಮಾರ್ ತಡೆವಿಡಿ ಸೇರಿದಂತೆ ಹಲವರು ಉಪಸ್ಥಿತರಿದ್ದು, ನೂತನ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು.