
ನವದೆಹಲಿ,ಅ.12- ಹರಿಯಾಣದ ಬಿಜೆಪಿಯ ಹಿರಿಯ ನಾಯಕಿ ಡಾ. ಸುಧಾ ಯಾದವ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.
ಇವರೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿವಿಧ 6 ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿ ಆದೇಶಿಸಿದ್ದಾರೆ.
ಬಿಜೆಪಿಯ ಹಿರಿಯ ನಾಯಕಿ ಮತ್ತು ಸಂಸದೀಯ ಮಂಡಳಿಯ ಸದಸ್ಯೆಯಾಗಿರುವ ಡಾ. ಸುಧಾ ಯಾದವ್ ಅವರಿಗೆ ಕರ್ನಾಟಕದ ರಾಜ್ಯಪಾಲರ ಜವಾಬ್ದಾರಿ ವಹಿಸಲಾಗಿದೆ.
ಜೊತೆಗೆ, ಸಿಕ್ಕಿಂನ ರಾಜ್ಯಪಾಲರಾದ ಓಂ ಪ್ರಕಾಶ್ ಮಾಥುರ್ ಅವರನ್ನು ಕೇರಳದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಹಾಗೂ ಕೇರಳದ ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ತಮಿಳುನಾಡಿನ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.
ಬ್ರಜ್ ಮೋಹನ್ ರಾಮ್ ಅವರನ್ನು ಒಡಿಶಾದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಡಾ. ಧಲ್ ಸಿಂಗ್ ಬಿಸೆನ್ ಅವರನ್ನು ಉತ್ತರಾಖಂಡದ ರಾಜ್ಯಪಾಲರನ್ನಾಗಿ ಹಾಗೂ ದುಷ್ಯಂತ್ ಗೌತಮ್ ಅವರನ್ನು ಸಿಕ್ಕಿಂನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.
























