
ಬೀದರ, ಫೆ.16: ಸಂತ ಸೇವಾಲಾಲ್ ಮಾಹಾರಾಜರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ದಿಕ್ಕು ತೋರಿಸುವ ದೀಪವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ರವಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಸಂತ ಸೇವಾಲಾಲ್‍ರ 287ನೇ ಜಯಂತ್ಯೋತ್ಸವ ಅಂಗವಾಗಿ ಸಂತ ಸೇವಾಲಾಲ ಮಹಾರಾಜನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಅನ್ಯಾಯ-ಅಂಧಶ್ರದ್ಧೆಗಳ ವಿರುದ್ಧ ಹೋರಾಡಿ ಸಮಾನತೆ, ಶಿಕ್ಷಣ ಹಾಗೂ ಆತ್ಮಗೌರವದ ಸಂದೇಶ ನೀಡಿದ ಸಂತ ಸೇವಾಲಾಲ್ ಮಹಾರಾಜರ ಆದರ್ಶಗಳು ಇಂದಿನ ಸಮಾಜಕ್ಕೂ ಅತ್ಯಂತ ಪ್ರಸ್ತುತವಾಗಿವೆ. ಸಂತ ಸೇವಾಲಾಲ ಮಹಾರಾಜರು ಮಹಾನ್ ಪವಾಡ ಪುರುಷರಾಗಿದ್ದರು, ಅವರು ಜನರ ಸಮಸ್ಯೆಗಳನ್ನು ಆಲಿಸಿಸುತ್ತಿದ್ದರು, ಮೂಡನಂಬಿಕೆ, ಕೆಟ್ಟ ಆಚರಣೆಗಳ ವಿರುದ್ಧ ಧ್ವನಿ ಎತ್ತಿದರು ಮತ್ತು ಜನರಿಗೆ ತಿಳಿವಳಿಕೆ ಮೂಡಿಸಿದರು. ಸಮಾಜದ ಐಕ್ಯತೆ ಮತ್ತು ಸಹಬಾಳ್ವೆಗೆ ಪ್ರೇರೆಪಿಸಿದರು. ಬ್ರೀಟಿಷರು ತೆರಿಗೆ ಹೆಚ್ಚಳ ಮಾಡಿದಾಗ ವೀರ ಸೇನಾನಿಯಾಗಿ ಹೋರಾಡಿದರು. ಯಾವುದೇ ಮಹಾನ ಪುರುಷರು ಒಂದೇ ಜಾತಿಗೆ ಸಿಮಿತವಿಲ್ಲ. ಅವರು ಮಾನವ ಕುಲಕ್ಕೆ ಸುಧಾರಣೆಗೆ ಪ್ರಯತ್ನಿಸಿದವರು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಸೇರಿದಂತೆ ಜಿಲ್ಲಾ ಬಂಜಾರಾ ಸಮಾಜದ ಅಧ್ಯಕ್ಷರಾದ ಗೋವರ್ಧನ ರಾಠೋಡ, ಮುಖಂಡರಾದ ಬಸವರಾಜ ಪವಾರ, ಮಾಣಿಕರಾವ ಪವಾರ, ವೀರಶೆಟ್ಟಿ ರಾಠೋಡ, ಗೋಪಾಲಸಿಂಗ ರಾಠೋಡ, ಕೀಶನರಾವ ರಾಠೋಡ ಸೇರಿದಮತೆ ಇತರರು ಉಪಸ್ಥಿತರಿದ್ದರು.






















