Home ಜಿಲ್ಲೆ ಕಲಬುರಗಿ ದಲಿತ ಬಾಲಕಿ ಲೈಂಗಿಕ ದೌರ್ಜನ್ಯ ಕೊಲೆ:ಖಂಡನೆ

ದಲಿತ ಬಾಲಕಿ ಲೈಂಗಿಕ ದೌರ್ಜನ್ಯ ಕೊಲೆ:ಖಂಡನೆ

ಜೇವರಗಿ,ಮೇ ೧೯: ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮುರಳಿ ಗ್ರಾಮದ ದಲಿತ ಯುವತಿ ಶೋಭಾ ರಾನಡೆ ಲೈಂಗಿಕ ದೌರ್ಜನ್ಯ ಕೊಲೆ ಪ್ರಕರಣವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲೂಕ ಸಂಚಾಲಕ ಸಿದ್ದು ಕೆರೂರ ತೀವ್ರವಾಗಿ ಖಂಡಿಸಿದ್ದಾರೆ. ಈ ಘಟನೆ ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವಂತೆ ಮಾಡಿದೆ. ಕೇವಲ ಒಂದೇ ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಇಂತಹದ್ದೇ ಮತ್ತೊಂದು ರಕ್ಕಸ ಕೃತ್ಯ ಮರುಕಳಿಸಿರುವುದು ಕಾನೂನು ಸುವ್ಯವಸ್ಥೆಯ ಸಂಪೂರ್ಣ ವೈಫಲ್ಯಕ್ಕೆ ಜ್ವಲಂತ ಸಾಕ್ಷಿಯಾಗಿದೆ.
ಕುಟುಂಬಕ್ಕೆ ಸರ್ಕಾರವು ತಕ್ಷಣವೇ ಕನಿಷ್ಠ ೫೦ ಲಕ್ಷ ರೂಪಾಯಿಗಳ ಪರಿಹಾರ ಧನ ಹಾಗೂ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ಸಾಮಾಜಿಕ ಭದ್ರತೆ ಒದಗಿಸಬೇಕು. ಜಿಲ್ಲೆಯಲ್ಲಿ ಸರಣಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ನಡೆಯುತ್ತಿದ್ದರೂ ನಿರ್ಲಕ್ಷ್ಯ ವಹಿಸಿರುವ ಸಂಬAಧಪಟ್ಟ ಪೊಲೀಸ್ ಅಧಿಕಾರಿಗಳ ವಿರುದ್ಧ ಸರ್ಕಾರ ಶಿಸ್ತು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.