
ಕಲಬುರಗಿ;ಜು.18: ನಗರದ ಚೌಕ ಪೊಲೀಸ್ ಠಾಣೆ ವ್ಯಾಪ್ತಿ ಪ್ರದೇಶಕ್ಕೆ ಸೇರಿದ ನಿವಾಸಿಯಾದ ಅಪ್ರಾಪ್ತೆಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ್ದರಿಂದ ನಾಗೇಶ ಅಲಿಯಾಸ್ ಬಾಬು ಅಲಿಯಾಸ್ ಬಾಬ್ಯಾ ತಂದೆ ಮೇಘು ರಾಠೋಡ ( 30) ಎಂಬಾತನಿಗೆ ಅಪರ ಜಿಲ್ಲಾ ಮತ್ತು ಸತ್ರ ( ವಿಶೇಷ ಪೊಕ್ಸೋ) ನ್ಯಾಯಾಲಯವು 25 ವರ್ಷ ಜೈಲು ಶಿಕ್ಷೆ ಮತ್ತು 45 ಸಾವಿರ ರೂ ದಂಡ ವಿಧಿಸಿ ಆದೇಶಿಸಿದೆ.
ನಾಗೇಶನು 2025 ರ ಮಾರ್ಚ 22 ರಿಂದ ಮೂರು ಬಾರಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಜೀವ ಬೆದರಿಕೆ ಹಾಕಿದ್ದನು.ಪ್ರಕರಣವನ್ನು ಪೊಲೀಸರು ನ್ಯಾಯಾಲಯಕ್ಕೆ ಒಪ್ಪಿಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಅಪರ ಜಿಲ್ಲಾ ಮತ್ತು ಸತ್ರ ( ವಿಶೇಷ ಪೊಕ್ಸೋ) ನ್ಯಾಯಾಲಯ ನ್ಯಾಯಾಧೀಶ ಎಸ್ ಎಲ್ ಚವ್ಹಾಣ ಅವರು ತೀರ್ಪು ನೀಡಿ ಆದೇಶಿಸಿದ್ದಾರೆ.
ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ( ಪೊಕ್ಸೋ) ಶಾಂತವೀರ ಬಿ ತುಪ್ಪದ ಅವರು ವಾದ ಮಂಡಿಸಿದ್ದರು.





























