
ಕಲಬುರಗಿ, ನ.13: ಪ್ರೀತಿಸುವ ನಾಟಕವಾಡಿ, ಮದುವೆ ಆಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ವಿದ್ಯಾರ್ಥಿಯೊಬ್ಬನಿಗೆ ಇಲ್ಲಿನ ಜಿಲ್ಲಾ ಪೆÇೀಕ್ಸೊ ವಿಶೇಷ ನ್ಯಾಯಾಲಯವು 20 ವರ್ಷ ಜೈಲು ಶಿಕ್ಷೆ, ರೂ.35 ಸಾವಿರ ದಂಡ ವಿಧಿಸಿದೆ.
ನಗರದ ಗಾಜಿಪುರ ನಿವಾಸಿ ಶುಭಂ ಅಲಿಯಾಸ್ ವರದಾ ಕಾಂಬಳೆ (21) ಶಿಕ್ಷೆಗೆ ಒಳಗಾದ ಅಪರಾಧಿ.
ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ವಿದ್ಯಾರ್ಥಿಯು, 17 ವರ್ಷದ ಬಾಲಕಿಯನ್ನು 2024ರ ನ.5ರಂದು ಲಾಡ್ಜ್ಗೆ ಕರೆದೊಯ್ದು ಅವಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಬಳಿಕ ಬಾಲಕಿ ಗರ್ಭಿಣಿಯಾಗಿದ್ದಳು. ಹೆರಿಗೆ ವೇಳೆ ಗರ್ಭದಲ್ಲೇ ಮಗು ಮೃತಪಟ್ಟಿದ್ದರಿಂದ ಬಾಲಕಿಯೂ ಮೃತಪಟ್ಟಿದ್ದಳು. ಈ ಕುರಿತು ಎಂ.ಬಿ.ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ (ಪೆÇೀಕ್ಸೊ ವಿಶೇಷ) ಎಸ್.ಎಲ್.ಚವ್ಹಾಣ ಅವರು ಶುಭಂಗೆ ಶಿಕ್ಷೆ ವಿಧಿಸಿದ್ದಾರೆ. ಮೃತ ಬಾಲಕಿಯ ಕುಟುಂಬಕ್ಕೆ ಕಾನೂನು ಸೇವಾ ಪ್ರಾಧಿಕಾರದಿಂದ 8 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ. ತುಪ್ಪದ ಅವರು ವಾದ ಮಂಡಿಸಿದ್ದರು.





















