
ಕಲಬುರಗಿ,ಅ.16-ತಾಯಿಯನ್ನು ಕೊಲೆಗೈದು ಅವಳ ಅಪ್ರಾಪ್ತ ವಯಸ್ಸಿನ ಮಗಳನ್ನು ಅಪಹರಿಸಿ ಲೈಗಿಂಕ ದೌರ್ಜನ್ಯ ಎಸಗಿದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಮಿಲ್ಲತ್ ನಗರದ ಅಜಾದಪುರ ರಸ್ತೆಯ ಶಫಿಶೇಖ್ ಡಿ.ಕೆ. (22) ಶಿಕ್ಷೆಗೆ ಒಳಗಾದವ. 2024 ಮಾ.15 ರಂದು ನಗರದ ಸಬ್ ಅರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ, ಪೋಕ್ಸೊ ಪ್ರಕರಣದ ಕುರಿತು ಪಿಐ ಮಹ್ಮದ್ ಫಸಿಯೋದ್ದೀನ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಹ್ಮದ್ ಮುಜೀರ್ ಉಲ್ಲಾ ಅಪರಾಧಿಗೆ ಜೀವಾವಧಿ ಶಿಕ್ಷೆ, 20 ವರ್ಷ ಜೈಲು ಮತ್ತು 3.50 ಲಕ್ಷ ದಂಡ ವಿಧಿಸಿ ಆದೇಶ ನೀಡಿದ್ದಾರೆ. ಅಲ್ಲದೆ ನೊಂದ ಬಾಲಕಿಗೆ 5 ಲಕ್ಷ ರೂ.ಪರಿಹಾರ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ.ತುಪ್ಪದ ವಾದ ಮಂಡಿಸಿದ್ದರು.