
ಕಲಬುರಗಿ,ಏ 16: ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ್ದರಿಂದ ಅಪರಾಧ ಎಸಗಿದ ವ್ಯಕ್ತಿಗೆ ಅಪರ ಜಿಲ್ಲಾ ಮತ್ತು ಸತ್ರ ( ವಿಶೇಷ ಪೊಕ್ಸೋ ) ನ್ಯಾಯಾಲಯ – (ಎಫ್ ಟಿ ಎಸ್ ಸಿ -1 ) ವು 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1.25 ಲಕ್ಷ ರೂ ದಂಡ ವಿಧಿಸಿದೆ.
ವೃತ್ತಿಯಂದ ಚಾಲಕನಾದ ಮಲರಾಜ ಬಾಬು ನಾಯ್ಕೋಡಿ ( 24) ಶಿಕ್ಷೆಗೊಳಗಾದ ಯುವಕ.
2025 ರ ಫೆಬ್ರವರಿ 16 ರಂದು ಅಪ್ರಾಪ್ತೆಯನ್ನು ಬಲವಂತವಾಗಿ ಬೆಂಗಳೂರಿಗೆ ಕರೆದು ಕೊಂಡು ಹೋಗಿ ಮದುವೆಯಾಗುತ್ತೇನೆ ಎಂದು ನಂಬಿಸಿ ತುಮಕೂಕು ತಾಲೂಕಿನ ಗ್ರಾಮವೊಂದರ ಹೊಲದಲ್ಲಿ ಅಕ್ರಮ ಬಂಧನದಲ್ಲಿಟ್ಟು ಲೈಂಗಿಕ ದೌರ್ಜನ್ಯ ಎಸಗಿದ್ದನು.ಈ ಕುರಿತು ವಾಡಿ ಠಾಣೆಯಲ್ಲಿ ದೂರು ದಾಖಲಾಗಿ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.
ಸಾಕ್ಷಾಧಾರಗಳನ್ನು ಪರಿಶೀಲಿಸಿದ ಅಪರ ಜಿಲ್ಲಾ ಮತ್ತು ಸತ್ರ ( ವಿಶೇಷ ಪೊಕ್ಸೋ ) ನ್ಯಾಯಾಲಯ – (ಎಫ್ ಟಿ ಎಸ್ ಸಿ -1 )ದ ನ್ಯಾಯಾಧೀಶ ಮಹ್ಮದ್ ಮುಜೀರ ಉಲ್ಲಾ ಅವರು ತೀರ್ಪು ನೀಡಿ ಆದೇಶಿಸಿದ್ದಾರೆ.ವಿಶೇಷ ಸರಕಾರಿ ಅಭಿಯೋಜಕ ಶಾಂತವೀರ ತುಪ್ಪದ ಅವರು ಸರಕಾರದ ಪರವಾಗಿ ವಾದ ಮಂಡಿಸಿದ್ದರು.






















