ಲೈಂಗಿಕ ದೌರ್ಜನ್ಯ ಎಸೆಗಿದ್ದ ಅಪರಾಧಿಗೆ 20 ವರ್ಷ ಜೈಲು

ಕಲಬುರಗಿ,ಅ.20: ತಾಲ್ಲೂಕಿನ ಗ್ರಾಮವೊಂದರಲ್ಲಿ 17 ವರ್ಷದ ಬಾಲಕಿಯನ್ನುಅಪಹರಿಸಿ ಲೈಂಗಿಕ ದೌರ್ಜನ್ಯ ಎಸೆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಜೈಲು ಹಾಗೂ 2.50 ಲಕ್ಷ ರೂ ದಂಡ ವಿಧಿಸಿದೆ.
ಕಾಳಗಿ ತಾಲ್ಲೂಕಿನ ಅರಣಕಲ್ ಗ್ರಾಮಸ್ಥ ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಪ್ಪ ಕಲಗುರ್ತಿ ಅಪರಾಧಿ. ಈತ ಬಾಲಕಿಯನ್ನು ತಾಲ್ಲೂಕಿನ ಗ್ರಾಮವೊಂದರಿಂದ ಒತ್ತಾಯ ಪೂರ್ವಕವಾಗಿ ಬೆಂಗಳೂರಿಗೆ ಕರೆದುಕೊಂಡು ಒಂದು ತಿಂಗಳ ಕಾಲ ಲೈಂಗಿಕದೌರ್ಜನ್ಯ ಎಸಗಿದ್ದ.
ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಮಹ್ಮದ್ ಮುಜೀರ್ ಉಲ್ಲಾ ಅವರು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶಾಂತವೀರ ತುಪ್ಪದ ಅವರು ವಾದ ಮಂಡಿಸಿದ್ದರು