ವಿದ್ಯಾರ್ಥಿವೇತನ ಪಡೆಯುವ ಮೂಲಕ ವಿವಿಗೆ ಕೀರ್ತಿ ತಂದ ಶರಣಬಸವ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು

ಕಲಬುರಗಿ;ಮೇ.23: ಶರಣಬಸವ ವಿಶ್ವವಿದ್ಯಾಲಯದ ಗೋದುತಾಯಿ ಮಹಿಳಾ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಭಾಗದ ಐದು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಿಂಗಾಪುರ ಮೂಲದ ಕ್ವೆಸ್ಟ್ ಗ್ಲೋಬಲ್ ಸಾಫ್ಟ್‍ವೇರ್ ಕಂಪನಿಯ ಕಾಪೆರ್Çರೇಟ್ ಸಾಮಾಜಿಕ ಜವಾಬ್ದಾರಿ (ಅSಖ) ಅಡಿಯಲ್ಲಿ 2024-25ರ ಶೈಕ್ಷಣಿಕ ವರ್ಷಕ್ಕೆ ಪ್ರತಿಷ್ಠಿತ ಇನ್‍ಸ್ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ (Iಇಇಇ) ವುಮನ್ ಇನ್ ಇಂಜಿನಿಯರಿಂಗ್ (WIಇ) ವತಿಯಿಂದ ತಲಾ 50,000 ರೂ.ಗಳ ವಿದ್ಯಾರ್ಥಿವೇತನವನ್ನು ಪಡೆಯುವ ಮೂಲಕ ವಿಶ್ವವಿದ್ಯಾಲಯಕ್ಕೆ ಹೆಮ್ಮೆ ತಂದಿದ್ದಾರೆ.
Iಇಇಇ ಮತ್ತು WIಇ ತೆಗೆದುಕೊಂಡ ಉಪಕ್ರಮದಲ್ಲಿ ಗೋದುತಾಯಿ ಮಹಿಳಾ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿಗಳು ಸತತ ಎರಡನೇ ವರ್ಷ ವಿದ್ಯಾರ್ಥಿವೇತನವನ್ನು ಪಡೆದಿದ್ದಾರೆ. 2023-24 ಶೈಕ್ಷಣಿಕ ವರ್ಷದಲ್ಲಿ ಒಟ್ಟು 11 ವಿದ್ಯಾರ್ಥಿಗಳು ತಲಾ 50,000 ರೂ.ಗಳ ವಿದ್ಯಾರ್ಥಿವೇತನವನ್ನು ಪಡೆದಿದ್ದರು. 2024-25ನೇ ಸಾಲಿನಲ್ಲಿ ವಿದ್ಯಾರ್ಥಿವೇತನ ಪಡೆದ ವಿದ್ಯಾರ್ಥಿಗಳ ಒಂದು ವೈಶಿಷ್ಟ್ಯವೆಂದರೆ, ಕರ್ನಾಟಕ, ಮಹಾರಾಷ್ಟ್ರ ಮತ್ತು ಕೇರಳದ ವಿವಿಧ ಇಂಜಿನಿಯರಿಂಗ್ ಕಾಲೇಜುಗಳಿಂದ ವಿದ್ಯಾರ್ಥಿವೇತನ ಪಡೆಯಲು ಆಯ್ಕೆಯಾದ 388 ವಿದ್ಯಾರ್ಥಿಗಳಲ್ಲಿ ಈ ಐವರು ಸೇರಿದ್ದಾರೆ.
Iಇಇಇ ವಿದ್ಯಾರ್ಥಿ ಶಾಖೆಯ Iಇಇಇ ಶಾಖೆಯ ಕೌನ್ಸೆಲರ್ ಆಗಿರುವ ಶರಣಬಸವ ವಿಶ್ವವಿದ್ಯಾಲಯದ ಡೀನ್ ಡಾ. ಲಕ್ಷ್ಮಿ ಪಾಟೀಲ್ ಮಾಕಾ ಗುರುವಾರ ಕಲಬುರಗಿ ನಗರದಲ್ಲಿ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲನಿರ್ಂಗ್ ವಿಭಾಗದ ವೈಷ್ಣವಿ ಸೋಮಾ, ರಾಧಿಕಾ ಷಣ್ಮುಖ್ ಮತ್ತು ಮೊಹಮ್ಮದಿ ಮಹೀನ್ ನಾಝ್ ಹಾಗೂ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್‍ನ ಭೂಮಿಕಾ ರೆಡ್ಡಿ ತಲಾ 50,000 ರೂ. ವಿದ್ಯಾರ್ಥಿವೇತನ ಪಡೆದ ಮೂವರು ವಿದ್ಯಾರ್ಥಿಗಳು ತಮ್ಮ ತಮ್ಮ ವಿಭಾಗಗಳಲ್ಲಿ ಆರನೇ ಸೆಮಿಸ್ಟರ್ ಓದುತ್ತಿದ್ದರೆ, ಅದೇ 50,000 ಮೊತ್ತದ ವಿದ್ಯಾರ್ಥಿವೇತನ ಪಡೆದ ಎಲೆಕ್ಟ್ರಾನಿಕ್ಸ್ ಮತ್ತು ಕಂಪ್ಯೂಟರ್ ಇಂಜಿನಿಯರಿಂಗ್‍ನ ವಿಭಾಗದ ವೈಷ್ಣವಿ ಟಕ್ಲೆ 8 ನೇ ಸೆಮಿಸ್ಟರ್‍ನಲ್ಲಿದ್ದಾರೆಂದು ತಿಳಿಸಿದ್ದಾರೆ.
ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‍ಪರ್ಸನ್ ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ, ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ, ವಿಶ್ವವಿದ್ಯಾಲಯದ ಉಪಕುಲಪತಿ ಪೆÇ್ರ. ಅನಿಲಕುಮಾರ ಬಿಡವೆ ಮತ್ತು ಕುಲಸಚಿವ ಡಾ. ಎಸ್. ಜಿ. ಡೊಳ್ಳೇಗೌಡರ್ ಸೇರಿದಂತೆ ಇತರರು ವಿದ್ಯಾರ್ಥಿಗಳ ಈ ಅಮೋಘ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಮಹಿಳಾ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಭಾಗದ ಬೋಧನಾ ಸಿಬ್ಬಂದಿಯ ಈ ಅವಿರತ ಪ್ರಯತ್ನಕ್ಕಾಗಿ ಮತ್ತು ವಿದ್ಯಾರ್ಥಿಗಳು ಈ ಪ್ರತಿಷ್ಠಿತ ವಿದ್ಯಾರ್ಥಿವೇತನವನ್ನು ಪಡೆಯಲು ಸಹಾಯ ಮಾಡಿದ್ದಕ್ಕಾಗಿ ಅವರನ್ನು ಶ್ಲಾಘಿಸಿದ್ದಾರೆ.