ಲಿಂಗೈಕ್ಯ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಅವರ ಪಾರ್ಥಿವ ಶರೀರಕ್ಕೆನಮನ ಸಲ್ಲಿಸಿದ ಎಲ್ಲ ಭಕ್ತವೃಂದಕ್ಕೂ ಶರಣಬಸವೇಶ್ವರ ಸಂಸ್ಥಾನದಿಂದ ಕೃತಜ್ಞತೆ

ಕಲಬುರಗಿ,ಆ.17: ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪಾಜಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್ಪರ್ಸನ್ ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜೀ ಹಾಗೂ ಸಂಘದ ಕಾರ್ಯದರ್ಶಿ ಬಸವರಾಜ್ ದೇಶಮುಖ್ ಅವರು ಅಗಸ್ಟ್ 15 ರಂದು ನಮ್ಮ ನಿಮ್ಮೆಲ್ಲರನ್ನ ಅಗಲಿದ ಶರಣಬಸವೇಶ್ವರ ಸಂಸ್ಥಾನದ ಎಂಟನೇ ಪೀಠಾಧಿಪತಿಗಳಾದ ಪೂಜ್ಯ ಡಾ. ಶರಣಬಸವ ಅಪ್ಪಾಜಿ ಅವರ ಪಾರ್ಥಿವ ಶರೀರಕ್ಕೆ ಶ್ರದ್ಧಾಂಜಲಿ ಸಲ್ಲಿಸಲು ಕಲಬುರಗಿ ನಗರದಿಂದ ಹಾಗೂ ದೂರದ ಊರುಗಳಿಂದ ಮತ್ತು ನೆರೆ ರಾಜ್ಯಗಳಿಂದ ಆಗಮಿಸಿದ ಎಲ್ಲಾ ಸದ್ಭಕ್ತರಿಗೆ ಸಂಸ್ಥಾನದ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
ಶನಿವಾರದಂದು ಸಂಸ್ಥಾನದ ವತಿಯಿಂದ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಅಗಲಿದ ಆತ್ಮಕ್ಕೆ ಗೌರವ ಸಲ್ಲಿಸಿದ್ದಕ್ಕಾಗಿ ಮತ್ತು ಡಾಕ್ಟರ್ ಅಪ್ಪಾಜಿಯವರ ಅಂತಿಮ ಸಂಸ್ಕಾರವನ್ನು ಸಂಪೂರ್ಣ ಸರಕಾರಿ ಗೌರವಗಳೊಂದಿಗೆ ನಡೆಸಲು ಅನುಕೂಲ ಮಾಡಿಕೊಟ್ಟಿದ್ದಕ್ಕಾಗಿ ರಾಜ್ಯ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಪೂಜ್ಯ ಅಪ್ಪಾಜಿ ಅವರಿಗೆ ಅಂತಿಮ ಗೌರವ ಸಲ್ಲಿಸಲು ಬೆಂಗಳೂರಿನಿಂದ ಕಲಬುರಗಿಗೆ ವಿಶೇಷ ವಿಮಾನದಲ್ಲಿ ಆಗಮಿಸಿ, ತಮ್ಮ ಪೂಜಾ ಅಪ್ಪಾಜಿಯವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಿದ್ದಕ್ಕಾಗಿ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರಿಗೆ ಕೃತಜ್ಞತೆಗಳನ್ನು ತಿಳಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ, ವೈದ್ಯಕೀಯ ಶಿಕ್ಷಣ ಡಾ ಶರಣ ಪ್ರಕಾಶ್ ಪಾಟೀಲ್ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಹಾಗೂ ಸಣ್ಣ ಕೈಗಾರಿಕೆಗಳ ರಾಜ್ಯ ಸಚಿವ ಶರಣಬಸಪ್ಪ ಗೌಡ ದರ್ಶನಾಪುರ್ ಅವರಿಗೆ ಧನ್ಯವಾದಗಳು ತಿಳಿಸಿರುವರು.
ಪೂಜ್ಯ ಡಾ ಅಪ್ಪಾಜಿಯವರ ಅಂತ್ಯಕ್ರಿಯೆ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳುವಲ್ಲಿ ಸಹಕಾರ ಮತ್ತು ಬೆಂಬಲ ನೀಡಿದ ಜಿಲ್ಲಾಧಿಕಾರಿ ಶ್ರೀಮತಿ ಫೌಜಿಯ ತರನುಮ್ ಹಾಗೂ ಪೆÇಲೀಸ್ ಆಯುಕ್ತ ಶರಣಪ್ಪ ಎಚ್ ಡಿ ಸೇರಿದಂತೆ ಎಲ್ಲಾ ಹಿರಿಯ ಪೆÇಲೀಸ್ ಅಧಿಕಾರಿಗಳಿಗೆ ಕೃತಜ್ಞತೆಗಳನ್ನು ತಿಳಿಸಿದ್ದಾರೆ. ಇದರಿಂದ ಲಕ್ಷಾಂತರ ಭಕ್ತರು ಕ್ರಮಬದ್ಧವಾಗಿ ಹಾಗೂ ಶಾಂತಿಯುತ ರೀತಿಯಲ್ಲಿ ಅಪ್ಪಾಜಿಯವರ ಅಂತಿಮ ದರ್ಶನ ಮಾಡಲು ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.
ಪೂಜ್ಯ ಅಪ್ಪಾಜಿಯವರ ಅಂತಿಮ ಯಾತ್ರೆಯಲ್ಲಿ ಕರಕೆಆರ್‍ಡಿಬಿ ಅಧ್ಯಕ್ಷ ಡಾ ಅಜಯ್ ಸಿಂಗ್ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಬಸವರಾಜ್ ಮತ್ತಿಮೂಡ್, ಕನೀಜ ಫಾತಿಮಾ, ಬಿ ಆರ್ ಪಾಟೀಲ, ಬಿ.ಜಿ. ಪಾಟೀಲ್, ಎಚ್ ಕೆ ಇ ಅಧ್ಯಕ್ಷ ಶಶಿಲ್ ಜಿ ನಮೋಶಿ, ಮಾಜಿ ಸಚಿವ ಬಂಡೆಪ್ಪ ಕಾಶಂಪುರ್, ರಾಜಶೇಖರ್ ಪಾಟೀಲ್ ಹುಮ್ನಾಬಾದ್ ಸೇರಿದಂತೆ ಅನೇಕ ಚುನಾಯಿತ ಪ್ರತಿನಿಧಿಗಳು ಹಾಗೂ ಮಾಜಿ ಸಚಿವರು ಭಾಗವಹಿಸಿದ್ದಕ್ಕಾಗಿ ಧನ್ಯವಾದಗಳು ತಿಳಿಸಿರುವರು.
ಪೂಜ್ಯ ಅಪ್ಪಾಜಿಯವರ ಅಂತಿಮ ಯಾತ್ರೆಯಲ್ಲಿ ಪುಷ್ಪ ನಮನ ಸಲ್ಲಿಸಿದ ಖಾಜಾ ಬಂದೇ ನವಾಜ್ ದರ್ಗಾದ ಸಜ್ಜದ ನಶೀಮ್ ಅವರಿಗೂ ಪ್ರಕಟಣೆಯಲ್ಲಿ ಧನ್ಯವಾದಗಳನ್ನು ತಿಳಿಸಿದ್ದಾರೆ.
ಸಂಸ್ಥಾನದ ಈ ಸಂಕಷ್ಟದ ಸಮಯದಲ್ಲಿ ಅಪಾರವಾಗಿ ಬೆಂಬಲ ನೀಡಿ ಸಹಕರಿಸಿದ ತಮ್ಮ ಸಂಪ್ರದಾಯದಂತೆ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಿದ ವಿವಿಧ ಧಾರ್ಮಿಕ ಮಠಗಳ ಎಲ್ಲಾ ಮಠಾಧೀಶರಿಗೆ ಪೂಜ್ಯ ದೊಡ್ಡಪ್ಪ ಅಪ್ಪಾಜಿ ಡಾ ಅವ್ವಾಜಿ ಹಾಗೂ ದೇಶಮುಖ್ ಅವರುಗಳು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
ವೀರಶೈವ ಧರ್ಮದ ಹಾಗೂ ಸಂಸ್ಥಾನದ ಸಂಪ್ರದಾಯದಂತೆ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿ ಚಿರಸ್ತ್ರಾಣ ಮತ್ತು ಲಿಂಗವನ್ನು ಚಿರಂಜೀವಿ ದೊಡ್ಡಪ್ಪ ಅಪ್ಪಾಜಿ ಅವರಿಗೆ ಹಸ್ತಾಂತರಿಸಿ ಹರಕೂಡ ಹಿರೇಮಠದ ಪೂಜ್ಯ ಚೆನ್ನವೀರ ಶಿವಾಚಾರ್ಯರು ಹಾಗೂ ಬೆಳಗುಂಪ ಬೃಹನ್ ಮಠದ ಪೂಜ್ಯಶ್ರೀ ಅಭಿನವ ಪರ್ವತೇಶ್ವರ ಶಿವಾಚಾರ್ಯರಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
ಧರ್ಮ ಜಾತಿಗಳನ್ನು ಮೀರಿ ಈ ಸಂಕಷ್ಟದ ಸಮಯದಲ್ಲಿ ನಮ್ಮೊಂದಿಗೆ ಸೇರಿ ಅಗಲಿದ ಆತ್ಮಕ್ಕೆ ಶಾಂತಿ ಕೋರಿ ವಿದಾಯ ಹೇಳಿದ ಲಕ್ಷಾಂತರ ಸದ್ಭಕ್ತರಿಗೆ ನಮ್ಮ ನಮನಗಳು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.