
ಜಮಖಂಡಿ: ತಾಲೂಕಿನ ತೊದಲಬಾಗಿ ಗ್ರಾಮದಲ್ಲಿ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿದ್ದ ಶೆಡ್ಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ತಾಲೂಕಾಡಳಿತ ಹಾಗೂ ಪೆÇಲೀಸ್ ಇಲಾಖೆಯ ಸಹಯೋಗದಲ್ಲಿ ನಡೆಯಿತು.
ತಹಶೀಲ್ದಾರ ಅನಿಲ ಬಡಗೇರ ಅವರ ನೇತೃತ್ವದಲ್ಲಿ ಅಧಿಕಾರಿಗಳು ತೆರವು ಕಾರ್ಯಾಚರಣೆ ಕೈಗೊಂಡರು. ಗ್ರಾಮದಲ್ಲಿ ಸುಮಾರು 58 ಶೆಡ್ಗಳಿದ್ದು, ಇವುಗಳಲ್ಲಿ ಎರಡು ಮನೆಗಳನ್ನೂ ತೆರವುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಇನ್ನು 18 ಶೆಡ್ಗಳಿಗೆ ನ್ಯಾಯಾಲಯದಿಂದ ತಡೆಯಾಜ್ಞೆ ದೊರೆತಿರುವ ಹಿನ್ನೆಲೆಯಲ್ಲಿ ಅವುಗಳನ್ನು ತೆರವುಗೊಳಿಸದೆ ಬಿಡಲಾಗಿದೆ ಎನ್ನಲಾಗಿದೆ.
ತೆರವು ಕಾರ್ಯಾಚರಣೆಯಿಂದ ಶೆಡ್ಗಳಲ್ಲಿ ವ್ಯಾಪಾರ ನಡೆಸಿ ಜೀವನ ನಿರ್ವಹಣೆ ಮಾಡುತ್ತಿದ್ದ ಬಡ ಹಾಗೂ ಸಣ್ಣ ವ್ಯಾಪಾರಸ್ಥ ಕುಟುಂಬಗಳಲ್ಲಿ ಆತಂಕ ಎದುರಾಗಿದೆ. ವ್ಯಾಪಾರವನ್ನೇ ಜೀವನಾಧಾರವನ್ನಾಗಿ ಮಾಡಿಕೊಂಡಿರುವ ಕುಟುಂಬಗಳ ಬದುಕಿನ ಗತಿ ಏನು? ತೆರವುಗೊಂಡ ಬಳಿಕ ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವವರು ಯಾರು? ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿವೆ.
ಕಾನೂನು ಹಾಗೂ ನಿಯಮಗಳ ಪಾಲನೆ ಅಗತ್ಯವೇ ಸರಿ. ಆದರೆ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ಬಡವರ ಜೀವನೋಪಾಯ ಹಾಗೂ ಕುಟುಂಬಗಳ ಆರ್ಥಿಕ ಪರಿಸ್ಥಿತಿಯನ್ನೂ ಅಧಿಕಾರಿಗಳು ಮಾನವೀಯ ದೃಷ್ಟಿಯಿಂದ ಪರಿಗಣಿಸಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ. ತೆರವುಗೊಳಿಸುವ ಮುನ್ನ ಸೂಕ್ತ ಪರ್ಯಾಯ ಸ್ಥಳ ಹಾಗೂ ವ್ಯಾಪಾರಕ್ಕೆ ಅವಕಾಶ ಕಲ್ಪಿಸಬೇಕು ಎಂಬುದು ಸಾರ್ವಜನಿಕರ ಮನವಿಯಾಗಿದೆ.
ಅಭಿವೃದ್ಧಿ ಕಾರ್ಯಗಳು ನಡೆಯಲಿ, ಆದರೆ ಬಡವರ ಬದುಕು ಬೀದಿಗೆ ಬರಬಾರದು. ಸಣ್ಣ ವ್ಯಾಪಾರಸ್ಥರ ಜೀವನೋಪಾಯಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸುವ ಮೂಲಕ ಅವರ ಕುಟುಂಬಗಳ ಭವಿಷ್ಯಕ್ಕೂ ಭದ್ರತೆ ಒದಗಿಸಬೇಕೆಂಬ ಆಶಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.
ಇನ್ನೂ ಈ ಕಾರ್ಯಾಚರಣೆಯಲ್ಲಿ ಸಿಪಿಐ ಮಲ್ಲಪ್ಪ ಮಡ್ಡಿ,ಪಿಎಸೈ ಅನೀಲ ಕುಂಬಾರ,ಅಪ್ಪಣ್ಣ ಐಗಳಿ ಸೇರಿದಂತೆ ಪೆÇೀಲಿಸ್ ಇಲಾಖೆ ಕಂದಾಯ ಇಲಾಖೆ ಗ್ರಾಮ ಪಂಚಾಯತಿ ಇಲಾಖೆ ಅಧಿಕಾರಿಗಳು ಇದ್ದರು





















