Home ಜಿಲ್ಲೆ ಶೆಟಕಾರ್ ಶಾಲೆ: ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ವಿತರಣೆ

ಶೆಟಕಾರ್ ಶಾಲೆ: ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ವಿತರಣೆ

ಬೀದರ:ಜೂ.೨:ಚಿದಂಬರ ಶಿಕ್ಷಣ ಸಂಸ್ಥೆಯ ಸಂಚಾಲಿತ ಇಲ್ಲಿಯ ಶ್ರೀಮತಿ ಇಂದಿರಾಬಾಯಿ ಗುರುತಪ್ಪ ಶೆಟಕಾರ್ ಪ್ರೌಢಶಾಲೆಯಲ್ಲಿ ಸೋಮವಾರ ನಡೆದ ಶಾಲಾ ಆರಂಭೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸಲಾಯಿತು.
ಪ್ರೌಢಶಾಲಾ ಹಂತವು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಹಂತವಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಚೆನ್ನಾಗಿ ವ್ಯಾಸಂಗ ಮಾಡಿ, ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು. ಶಿಕ್ಷಕರು ಹಾಗೂ ಶಾಲೆಗೆ ಕೀರ್ತಿ ತರಬೇಕು ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಸದ್ಗುರು ಸಿದ್ಧಾರೂಢ ಮಹಿಳಾ ಪದವಿ ಕಾಲೇಜು ಪ್ರಾಚಾರ್ಯ ನಾಗಪ್ಪ ಜಾನಕನೋರ ಹೇಳಿದರು.
ವಿದ್ಯಾರ್ಥಿಗಳು ಮೊಬೈಲ್‌ನಿಂದ ದೂರವಿರಬೇಕು. ಕಲಿಕೆಯತ್ತಲೇ ಗಮನ ಕೇಂದ್ರೀಕರಿಸಬೇಕು. ಶಿಕ್ಷಕರು ಹಾಗೂ ಪಾಲಕರು ಹೆಮ್ಮೆ ಪಡುವಂಥ ಸಾಧನೆ ಮಾಡಬೇಕು ಎಂದು ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕ ಲಕ್ಷ್ಮಣ ಎಂ. ಪೂಜಾರಿ ತಿಳಿಸಿದರು.
ಶಿಕ್ಷಕರಾದ ನಿರ್ಮಲಾ ಕುಲಕರ್ಣಿ, ಸತ್ಯವಾನ್ ಭೋಸ್ಲೆ, ಗೋಪಾಲ್ ಕುಲಕರ್ಣಿ, ಶರಣಪ್ಪ ಪೂಜಾರಿ, ಶರಣಪ್ಪ ಸಾಗರ್, ಧೂಳಪ್ಪ ಸಿದ್ದೇಶ್ವರ, ನಾಗಪ್ಪ ಮೋಟಾ, ಅಮೀತ್ ಸೋಲಪುರ, ಸತ್ಯವತಿ, ಮೀನಾಕ್ಷಿ ಮತ್ತಿತರರು ಇದ್ದರು. ಶಿಕ್ಷಕ ನಾಗನಾಥ ಬಿರಾದಾರ ನಿರೂಪಿಸಿದರು.
ಇದಕ್ಕೂ ಮುನ್ನ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಪುಷ್ಪ ವೃಷ್ಟಿ ಮೂಲಕ ಸ್ವಾಗತಿಸಿ ಬರಮಾಡಿಕೊಳ್ಳಲಾಯಿತು.