Home ಜಿಲ್ಲೆ ಕಲಬುರಗಿ ಸಾಧಕರಿಗೆ ಶಿವ ಛತ್ರಪತಿ ಪ್ರಶಸ್ತಿ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸತ್ಕಾರ

ಸಾಧಕರಿಗೆ ಶಿವ ಛತ್ರಪತಿ ಪ್ರಶಸ್ತಿ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸತ್ಕಾರ

ಕಲಬುರಗಿ, ಜೂ. 7: ಕರ್ನಾಟಕ ಕ್ಷತ್ರೀಯ ಮರಾಠಾ ಪರಿಷತ್, ಬೆಂಗಳೂರು (ರಿ) ಹಾಗೂ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕೋತ್ಸವದ ಅಂಗವಾಗಿ ಪ್ರಶಸ್ತಿ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭವನ್ನು ನಗರದ ಟ್ಯಾಂಕಬಂಡ್ ರಸ್ತೆಯಲ್ಲಿರುವ ಎಲ್ಲಮ್ಮ ದೇವಸ್ಥಾನ ಕಲ್ಯಾಣ ಮಂಟಪದಲ್ಲಿ ಶನಿವಾರ ವಿಜೃಂಭಣೆಯಿಂದ ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಮಾಜಿ ಗೃಹ ಸಚಿವರು ಹಾಗೂ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ರಾಜ್ಯ ಮುಖ್ಯ ಆಯುಕ್ತರಾದ ಡಾ. ಪಿ.ಜಿ.ಆರ್. ಸಿಂಧ್ಯಾ ಉದ್ಘಾಟಿಸಿದರು. ವಿಧಾನ ಪರಿಷತ್ ಸದಸ್ಯರಾದ ಡಾ. ಎಂ.ಜಿ. ಮೂಳೆ, ಮಕ್ಕಳ ತಜ್ಞರು ಹಾಗೂ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ. ದಿನಕರ ಮೋರೆ ಸೇರಿದಂತೆ ಅನೇಕ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕ್ಷತ್ರೀಯ ಮರಾಠಾ ಪರಿಷತ್ ಕಲಬುರಗಿ ಜಿಲ್ಲಾ ಅಧ್ಯಕ್ಷರಾದ ಆರ್.ಬಿ. ಜಗದಾಳೆ ವಹಿಸಿದ್ದರು. ಸಮಾರಂಭದಲ್ಲಿ ಸಮಾಜದ ಹಿರಿಯರು, ಗಣ್ಯರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಪ್ರತಿಭಾವಂತರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶಿವ ಛತ್ರಪತಿ ಪ್ರಶಸ್ತಿ ವಿಜೇತರಾದ ಡಾ. ಪಿ.ಜಿ.ಆರ್. ಸಿಂಧ್ಯಾ, ಡಾ. ಎಂ.ಜಿ. ಮೂಳೆ, ಡಾ. ಅರುಣಕುಮಾರ ಪಾಟೀಲ, ಡಾ. ದಿನಕರ ಮೋರೆ ಹಾಗೂ ರಮೇಶ್ ಚಿಚಕೋಟೆ ಅವರನ್ನು ವಿಶೇಷವಾಗಿ ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇದೇ ವೇಳೆ 2025-26ನೇ ಸಾಲಿನ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಸತ್ಕರಿಸಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪೆÇ್ರೀತ್ಸಾಹಿಸುವ ಉದ್ದೇಶದಿಂದ ಈ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಪ್ರತಾಪರಾವ್ ಜಿ. ಕಾಕಡೆ, ಸುಭಾಷ್ ಹೆಚ್. ಜಾಧವ್, ರತನ ಮಾನೆ, ಎನ್.ಎಸ್. ಪಾಟೀಲ್, ರಾಜು ಜವಳಕರ, ಸುರೇಶ್ ಬುಲಬುಲೆ, ಸಿದ್ದಾಜಿ ಪಾಟೀಲ್, ರಾಜು ಶಿಂದೆ, ದತ್ತಾ ಕೆ. ಕಾಳೆ, ವಿಜಯ್ ವಿ. ಮೋರೆ, ನಾರಾಯಣ ನವಲೆ, ಜ್ಯೋತಿಬಾ ಜಾಧವ್, ಶ್ರೀರಾಮ ಶ್ರೀಶೈಲೆ, ಸುರೇಶ್ ನಲವಾಡೆ, ಕೈಲಾಸ ಎಲ್. ಮೋರೆ, ರವಿ ಸೂರ್ಯವಂಶಿ, ಭೀಮರಾಜ್ ವಾಘಮಾರೆ, ಅರುಣಕುಮಾರ ಕಡಂ, ಸಹದೇವ ಭೋಸಲೆ ಸೇರಿದಂತೆ ಸಮಾಜದ ಅನೇಕ ಮುಖಂಡರು, ಯುವಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಆದರ್ಶಗಳು, ರಾಷ್ಟ್ರಪ್ರೇಮ, ಶೌರ್ಯ ಹಾಗೂ ಸಮಾಜ ಸೇವೆಯ ಮೌಲ್ಯಗಳನ್ನು ಯುವಜನರಲ್ಲಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಗಣ್ಯರು ಅಭಿಪ್ರಾಯಪಟ್ಟರು. ಸಮಾಜದ ಸಂಘಟನೆ, ಶೈಕ್ಷಣಿಕ ಪ್ರಗತಿ ಹಾಗೂ ಯುವ ಪ್ರತಿಭೆಗಳಿಗೆ ಪೆÇ್ರೀತ್ಸಾಹ ನೀಡುವ ಉದ್ದೇಶದಿಂದ ಮುಂದೆಯೂ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಂಘಟಕರು ತಿಳಿಸಿದರು.