Home ಜಿಲ್ಲೆ ಪತ್ರಕರ್ತರ ಏಕತೆಗೆ ಶಿವಾನಂದ ತಗಡೂರು ಕರೆ

ಪತ್ರಕರ್ತರ ಏಕತೆಗೆ ಶಿವಾನಂದ ತಗಡೂರು ಕರೆ

ಯಾದಗಿರಿ:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸೋಮವಾರ ಯಾದಗಿರಿ ನಗರದ ಪತ್ರಿಕಾ ಭವನಕ್ಕೆ ಭೇಟಿ ನೀಡಿ, ಪತ್ರಿಕಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಪತ್ರಕರ್ತರು ನಿಷ್ಪಕ್ಷಪಾತ ಹಾಗೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. ವೃತ್ತಿ ಸವಾಲುಗಳನ್ನು ಎದುರಿಸಲು ಪತ್ರಕರ್ತರು ಸಂಘಟಿತರಾಗಿ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಹಿರಿಯ ಪತ್ರಕರ್ತರು, ವಿವಿಧ ಮಾಧ್ಯಮ ಪ್ರತಿನಿಧಿಗಳು ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಬಳಿಕ ಎಲ್ಲರೂ ಒಟ್ಟಾಗಿ ಸ್ಮರಣಾರ್ಥ ಗುಂಪು ಛಾಯಾಚಿತ್ರಕ್ಕೆ ಪೆÇೀಸ್ ನೀಡಿದರು.

ಅಧ್ಯಕ್ಷ ಮಲ್ಲಪ್ಪ ಸಂಕಿನ್ ಬಾಬುರಾವ್ ಯಡ್ರಾಮಿ ಸೇರಿದಂತೆ ಇನ್ನೂ ಹಲವಾರು ಪತ್ರಕರ್ತರು ಉಪಸ್ಥಿತರಿದ್ದರು