Home ಜಿಲ್ಲೆ ಸರ್ಕಾರಿ ಶಾಲೆಯ ೫೫ ಎಲ್‌ಕೆಜಿ-ಯುಕೆಜಿ ಮಕ್ಕಳಿಗೆ ಸ್ವಂತ ಖರ್ಚಿನಲ್ಲಿ ಶೂ, ಸಾಕ್ಸ್

ಸರ್ಕಾರಿ ಶಾಲೆಯ ೫೫ ಎಲ್‌ಕೆಜಿ-ಯುಕೆಜಿ ಮಕ್ಕಳಿಗೆ ಸ್ವಂತ ಖರ್ಚಿನಲ್ಲಿ ಶೂ, ಸಾಕ್ಸ್

ಸಂಜೆವಾಣಿ ವಾರ್ತೆ,
ವಿಜಯಪುರ, ಸೆ. ೩೦: ಸರ್ಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳಿಗೂ ಸಮಾನ ಸೌಲಭ್ಯ ದೊರೆಯಬೇಕು ಎಂಬ ಕಾಳಜಿಯಿಂದ ಮುಖಂಡ ಮಲ್ಲಿಕಾರ್ಜುನ ಹಂಜಗಿ ಅವರು ತಮ್ಮ ಸ್ವಂತ ಖರ್ಚಿನಲ್ಲಿ ೫೫ ಎಲ್‌ಕೆಜಿ ಹಾಗೂ ಯುಕೆಜಿ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸಿ ಮಾನವೀಯತೆ ಮೆರೆದಿದ್ದಾರೆ.
ಜಿಲ್ಲೆಯ ತಿಕೋಟಾ ಪಟ್ಟಣದ ಸರ್ಕಾರಿ ಹೆಣ್ಣು ಮಕ್ಕಳ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಒಂದರಿAದ ಎಂಟನೇ ತರಗತಿ ಮಕ್ಕಳಿಗೆ ಸರ್ಕಾರದಿಂದ ಶೂ ಹಾಗೂ ಸಾಕ್ಸ್ ವಿತರಿಸಲಾಗುತ್ತಿದೆ. ಆದರೆ ಎಲ್‌ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ಈ ಸೌಲಭ್ಯ ಇರಲಿಲ್ಲ. ಇದನ್ನು ಗಮನಿಸಿದ ಹಂಜಗಿ ಅವರು ಯಾವುದೇ ತಾರತಮ್ಯವಿಲ್ಲದೆ ಚಿಕ್ಕ ಮಕ್ಕಳಿಗೂ ಸೌಲಭ್ಯ ದೊರೆಯಬೇಕು ಎಂಬ ಉದ್ದೇಶದಿಂದ ಮಂಗಳವಾರ ೫೫ ಮಕ್ಕಳಿಗೆ ಸ್ವಂತ ಹಣದಲ್ಲಿ ಶೂ ಹಾಗೂ ಸಾಕ್ಸ್ ವಿತರಿಸಿದರು.
ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವುದರಿಂದ ಅವರಲ್ಲಿ ಆತ್ಮವಿಶ್ವಾಸ ಹೆಚ್ಚುವುದರ ಜತೆಗೆ ಸರ್ಕಾರಿ ಶಾಲೆಗಳ ಅಭಿವೃದ್ಧಿಗೂ ಸಹಕಾರಿಯಾಗಲಿದೆ. ಸಮಾಜದ ದಾನಿಗಳು, ಮುಖಂಡರು ಹಾಗೂ ಸಾರ್ವಜನಿಕರು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಶಿಕ್ಷಕರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಮುಖ್ಯಶಿಕ್ಷಕ ಎಂ.ಕೆ. ಬಗಲಿ, ರಾಮರಾವ ದೇಸಾಯಿ, ಮಾಳು ಗುಗದಡ್ಡಿ, ಸದಾಶಿವ ಪೂಜಾರಿ, ಶಿವಾನಂದ ಪರೀಟ್, ಗುರಯ್ಯ ಕೊಳಾಲಮಠ, ಬಸವರಾಜ ನಾವಿ, ಬಾಪು ಕೊಣ್ಣೂರ, ಅಶ್ವಿನಿ ಶಿವನಾಕರ, ಎಸ್.ಎಸ್. ಚಾವರ ಸೇರಿದಂತೆ ಶಿಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.