
ಬೀದರ್:ಫೆ.13: ತಾಲೂಕಿನ ಕಂಗನಕೋಟ್ ಗ್ರಾಮದಲ್ಲಿ ಮಹಾ ಶಿವರಾತ್ರಿ ನಿಮಿತ್ತ ಫೆಬ್ರವರಿ 15, 16 ಮತ್ತು 17ರಂದು ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವವನ್ನು ಅತ್ಯಂತ ವೈಭವಪೂರ್ಣವಾಗಿ ಆಚರಿಸಲಾಗುವುದು ಎಂದು ಶ್ರೀ ಸಿದ್ದೇಶ್ವರ ದೇವಾಲಯ ಟ್ರಸ್ಟ್ನ ಆಡಳಿತ ಮಂಡಳಿ ತಿಳಿಸಿದೆ.
ಫೆಬ್ರವರಿ 15ರಂದು ಸಂಜೆ ಸಾಮೂಹಿಕ ಇಷ್ಟಲಿಂಗ ಪೂಜೆ, ಕೋಲಾಟ ಕಾರ್ಯಕ್ರಮ ಹಾಗೂ ಕಂಗನಕೋಟ್ ಸರ್ಕಾರಿ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ.
ಫೆಬ್ರವರಿ 16 ಮತ್ತು 17ರಂದು ಸಂಜೆ 4 ಗಂಟೆಗೆ ಪೂಜ್ಯ ಶ್ರೀ ಗಣೇಶಾನಂದ ಮಹಾರಾಜರ ಸಾನಿಧ್ಯದಲ್ಲಿ ಪ್ರವಚನ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹನೀಯರನ್ನು ವಿಶೇಷವಾಗಿ ಸನ್ಮಾನಿಸುವ ಕಾರ್ಯಕ್ರಮವೂ ನಡೆಯಲಿದೆ.
ಈ ಮಹೋತ್ಸವಕ್ಕೆ ವಿವಿಧ ಗಣ್ಯರು ಭಾಗವಹಿಸಲಿದ್ದು, ಎಲ್ಲಾ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಶ್ರೀ ಸಿದ್ದೇಶ್ವರ ದೇವಾಲಯ ಟ್ರಸ್ಟ್ ಆಡಳಿತ ಮಂಡಳಿ ಮನವಿ ಮಾಡಿದೆ.

























