Home ಜಿಲ್ಲೆ ರೇಷನ್ ಕಾರ್ಡ್ ಇ-ಕೆವೈಸಿ ಅವಧಿ ವಿಸ್ತರಣೆಗೆ ಸಿದ್ದು ಫುಲಾರಿ ಆಗ್ರಹ

ರೇಷನ್ ಕಾರ್ಡ್ ಇ-ಕೆವೈಸಿ ಅವಧಿ ವಿಸ್ತರಣೆಗೆ ಸಿದ್ದು ಫುಲಾರಿ ಆಗ್ರಹ

ಬೀದರ್: ಪಡಿತರ ಚೀಟಿಗೆ (ರೇಷನ್ ಕಾರ್ಡ್) ಇ-ಕೆವೈಸಿ (e-ಏಙಅ) ಜೋಡಣೆ ಪ್ರಕ್ರಿಯೆಗೆ ವಿಧಿಸಿರುವ ಗಡುವನ್ನು ಸರ್ಕಾರ ಕೂಡಲೇ ವಿಸ್ತರಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ (ಂಂP) ಜಿಲ್ಲಾಧ್ಯಕ್ಷ ಸಿದ್ದು ಫುಲಾರಿ ಒತ್ತಾಯಿಸಿದರು.
ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿರುವ ಅವರು, ಇ-ಕೆವೈಸಿ ಮಾಡಿಸಲು ಸಾರ್ವಜನಿಕರು ತಮ್ಮ ಕೆಲಸ-ಕಾರ್ಯಗಳನ್ನು ಬಿಟ್ಟು ಗಂಟೆಗಟ್ಟಲೆ ಸರದಿಯಲ್ಲಿ ನಿಲ್ಲುವಂತಾಗಿದೆ. ಗ್ರಾಮೀಣ ಭಾಗದಲ್ಲಿ ಸರ್ವರ್ ಸಮಸ್ಯೆ ಹಾಗೂ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ವೃದ್ಧರಿಗೆ ಈ ಪ್ರಕ್ರಿಯೆಯಿಂದ ತೀವ್ರ ತೊಂದರೆಯಾಗುತ್ತಿದೆ. ಗಾಂಧಿನಗರ ಸೇರಿದಂತೆ ಹಲವೆಡೆ ಕೇವಲ ಶೇ. 25ರಷ್ಟು ಮಾತ್ರ ಪ್ರಕ್ರಿಯೆ ಮುಗಿದಿದ್ದು, ಇನ್ನು ಶೇ. 75ರಷ್ಟು ಬಾಕಿ ಉಳಿದಿದೆ. ಆದ್ದರಿಂದ ಸರ್ಕಾರ ಯಾವುದೇ ಗಡುವು ವಿಧಿಸದೆ ಇನ್ನೂ ಒಂದು ಅಥವಾ ಎರಡು ತಿಂಗಳುಗಳ ಕಾಲ ಕಾಲಾವಕಾಶವನ್ನು ಮುಂದೂಡಬೇಕೆಂದು ಆಗ್ರಹಿಸಿದರು.
ಆಕ್ಟೋಬರ್ 1ರಿಂದ ನಮ್ಮ ಪಕ್ಷದ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲು ತಿರ್ಮಾನಿಸಲಾಗಿದ್ದು, ಮುಂಬರುವ ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ, ಗ್ರಾಮ ಪಂಚಾಯತಿ, ಮಹಾನಗರ ಪಾಲಿಕೆ, ನಗರ ಸಭೆ, ಪುರ ಸಭೆ, ಪಟ್ಟಣ ಪಂಚಾಯತ ಚುನಾವಣೆಗಳಲ್ಲಿ ನಮ್ಮ ಪಕ್ಷದ ಹುರಿಯಾಳುಗಳನ್ನು ಕಣಕ್ಕಿಳಿಸಲಾಗುವುದೆಂದು ಫುಲಾರಿ ಸ್ಪಷ್ಟಪಡಿಸಿದರು.
ಆಮ್ ಆದ್ಮಿ ಪಾರ್ಟಿಯ ಅಲ್ಪಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ಸೈಯದ್ ಜಮೀಲ್ ಖಾದ್ರಿ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣ ಮತ್ತು ನಿರುದ್ಯೋಗದ ಸಮಸ್ಯೆಗಳ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದರು.
“ಕೇವಲ ಉಚಿತ ರೇಷನ್ ನೀಡುವುದರಿಂದ ಬಡತನ ನಿರ್ಮೂಲನೆಯಾಗುವುದಿಲ್ಲ, ಬದಲಿಗೆ ಪ್ರತಿಯೊಬ್ಬರಿಗೂ ಗುಣಮಟ್ಟದ ಉಚಿತ ಶಿಕ್ಷಣ ಮತ್ತು ಆರೋಗ್ಯ ಸೇವೆ ಸಿಗಬೇಕು. ಪಂಜಾಬ್‍ನಲ್ಲಿ ಸರ್ಕಾರಿ ಶಾಲೆಯ ನೂರಾರು ವಿದ್ಯಾರ್ಥಿಗಳು ‘ನೀಟ್’ (ಓಇಇಖಿ) ಪರೀಕ್ಷೆ ತೇರ್ಗಡೆಯಾಗುತ್ತಿದ್ದಾರೆ. ಆದರೆ ನಮ್ಮಲ್ಲಿ ಶಿಕ್ಷಣ ವ್ಯವಸ್ಥೆ ಹದಗೆಟ್ಟಿದೆ. ಸರ್ಕಾರಿ ಶಾಲೆಗಳ ಶಿಕ್ಷಕರ ಮಕ್ಕಳೂ ಸರ್ಕಾರಿ ಶಾಲೆಗಳಲ್ಲೇ ಕಲಿಯುವಂತಾಗಬೇಕು ಹಾಗೂ ಅಧಿಕಾರಿಗಳು ನಿಯಮಿತವಾಗಿ ಶಾಲೆಗಳ ಮೇಲ್ವಿಚಾರಣೆ ನಡೆಸಬೇಕು” ಎಂದರು.
ರೈತರ ಸಂಕಷ್ಟ ಮತ್ತು ನಿರುದ್ಯೋಗ: ತೊಗರಿ, ಉದ್ದು ಸೇರಿದಂತೆ ಬೆಳೆ ಹಾನಿಯಿಂದ ಕಂಗಾಲಾಗಿರುವ ರೈತರಿಗೆ ಖಾಸಗಿ ಶಾಲೆಗಳ ಶುಲ್ಕ ಭರಿಸುವುದು ದುಸ್ತರವಾಗಿದೆ. ಕೈಗಾರಿಕಾ ಪ್ರದೇಶಗಳಲ್ಲಿ ಯಾವುದೇ ಅಭಿವೃದ್ಧಿಯಾಗದೆ ಸ್ಥಳೀಯ ಯುವಕರು ನಿರುದ್ಯೋಗದಿಂದ ತತ್ತರಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾ ಉಪಾಧ್ಯಕ್ಷ ರಾಜಕುಮಾರ ಪಾಟೀಲ ಮಾತನಾಡಿದರು.
ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಮ್.ಡಿ ಜಾವಿದ್, ನಗರ ಘಟಕದ ಅಧ್ಯಕ್ಷ ರಾಜಶೇಖರ.ಜಿ, ಯುವ ಘಟಕದ ಜಿಲ್ಲಾಧ್ಯಕ್ಷ ವೆಂಕಟೇಶ, ಪಕ್ಷದ ಪದಾಧಿಕಾರಿಗಳಾದ ಸುಕುಮಾರ ಚಿಲ್ಲರ್ಗೆ, ವಿಠಲ ತುಕಾರಾಮ, ಡಿ.ಕೆ ಯೋಹನ, ಬಸವರಾಜ ಸ್ವಾಮಿ, ಕಂಟೆಪ್ಪ ಗುಪ್ತಾ ಹಾಗೂ ಇತರರು ಪತ್ರಿಕಾಗೋಷ್ಟಿಯಲ್ಲಿದ್ದರು.