ಮತಗಳ್ಳತನ ವಿರುದ್ಧ ಸಹಿ ಸಂಗ್ರಹ ಅಭಿಯಾನ

ಬೆಂಗಳೂರು, ಅ. ೨೩-ರಾಜಾಜಿನಗರ ವಿಧಾನಸಭಾ ಕ್ಷೇತ್ರ ಮೋದಿ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರಜಾಪ್ರಭುತ್ವದ ಮೂಲ ಅಸ್ತಿತ್ವವಾದ ಮತದಾನದ ಹಕ್ಕಿನ ರಕ್ಷಣೆಯ ಉದ್ದೇಶದಿಂದ ಕೆಪಿಸಿಸಿ ವತಿಯಿಂದ ಇಂದು ಮತಗಳ್ಳತನದ ವಿರುದ್ಧ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ಈ ಅಭಿಯಾನದ ಮೂಲಕ ಮತದಾನದ ನೈಜತೆಯನ್ನು ಕಾಪಾಡುವ, ಜನರ ಹಕ್ಕುಗಳ ರಕ್ಷಣೆಗೆ ಧ್ವನಿಯೆತ್ತುವ, ಹಾಗೂ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಗರಿಕರು ಒಟ್ಟಾಗಿ ಹೋರಾಟ ನಡೆಸುವಂತಾಗಿದೆ.


ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷರಾದ ಹನುಮಂತರಾಯಪ್ಪ, ಮಾಜಿ ಮಹಾಪೌರರಾದ ಜೆ.ಹುಚ್ಚಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ರವರು, ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಜಿ.ಕೃಷ್ಣಮೂರ್ತಿ, ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಸುಧಾಕರ್, ಆಪಲ್ ನಾಗರಾಜ್ ರವರು ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿ, ಸಾರ್ವಜನಿಕರಿಂದ ಸಹಿ ಸಂಗ್ರಹ ಮಾಡಿದರು.


ಪ್ರಜಾಪ್ರಭುತ್ವದಲ್ಲಿ ಸಂವಿಧಾನ ಮತದಾನದ ಮಾಡುವ ಹಕ್ಕು ನೀಡಿದೆ, ಮತದಾನ ಹಕ್ಕನ್ನು ವಂಚಿಸುವ ಕೆಲಸವಾಗುತ್ತಿದೆ. ಚಿಕ್ಕ ಮನೆಯಲ್ಲಿ ೮೦ಕ್ಕೂ ಹೆಚ್ಚು ಮತದಾರರು ಇದ್ದಾರೆ, ಒಬ್ಬ ವ್ಯಕ್ತಿಯ ಹೆಸರು ಹಲವಾರು ಕಡೆಗಳಲ್ಲಿ ಮತಗಟ್ಟೆ ಹೆಸರು ಇರುವುದು. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ರವರ ನೇತೃತ್ವದಲ್ಲಿ ದೇಶಾದ್ಯಂತ ಮತಕಳ್ಳತನ ವಿರುದ್ದ ದೊಡ್ಡ ಹೋರಾಟ ಮಾಡಲಾಗುತ್ತಿದೆ.ಪ್ರತಿಯೊಬ್ಬ ಪ್ರಜೆಗೂ ಮತದಾನ ಮಾಡುವ ಹಕ್ಕು ಇದೆ ಇದರ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.


ಬಿಜೆಪಿ ಪಕ್ಷವು ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಷಡ್ಯಂತ್ರದಿಂದ ಮತಕಳ್ಳತನ ಮಾಡಿ ಜನರ ಮತದಾನ ಅಧಿಕಾರವನ್ನು ಕಿತ್ತೂಕೊಂಡಿದ್ದಾರೆ. ಸಂವಿಧಾನ ಉಳಿಸಲು ಪ್ರಜಾಪ್ರಭುತ್ವ ಉಳಿಸಲು ರಾಹುಲ್ ಗಾಂಧಿ ರವರು ಮತಕಳ್ಳತನ ವಿರುದ್ದ ದೇಶದ್ಯಾಂತ ಹೋರಾಟ ಮಾಡುತ್ತಿದ್ದಾರೆ. ಡಿಲೀಟ್ ಮತ್ತು ಸೇರ್ಪಡೆ ಮತದಾರರ ಪಟ್ಟಿಯನ್ನ ಚುನಾವಣೆ ಆಯೋಗ ನೀಡುತ್ತಿಲ್ಲ ಎಂದು ಮುಖಂಡರು ಆರೋಪಿಸಿದರು.


ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಮುಖಂಡರು, ಕಾರ್ಯಕರ್ತರು ಮತ್ತು ಯುವ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.