
ಹುಬ್ಬಳ್ಳಿ,ಜು೪: ತಾಲೂಕಿನ ಕುಸುಗಲ್ ಗ್ರಾಮದ ಪ್ರತಿಭಾವಂತ ಕ್ರೀಡಾಪಟು ಕುಮಾರಿ ಐಶ್ವರ್ಯ ರವಿಚಂದ್ರ ಬಾಲೆ ಹೊಸೂರು ಅವರು ಜರ್ಮನ್ ದೇಶದಲ್ಲಿ ನಡೆದ ಅಂತಾರಾಷ್ಟಿçÃಯ ಶೂಟಿಂಗ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಗೆಲ್ಲುವ ಮೂಲಕ ಜಾಗತಿಕ ಮಟ್ಟದಲ್ಲಿ ಭಾರತದ ಕೀರ್ತಿ ಮೆರೆದಿದ್ದಾರೆ.
ಈ ಹಿನ್ನೆಲೆಯಲ್ಲಿ ವಿದ್ಯಾನಗರದ ಶಿವಶಂಕರ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಸದಾನಂದ ವಿ. ಡಂಗನವರ ಅವರು ಐಶ್ವರ್ಯ ಅವರನ್ನು ಸನ್ಮಾನಿಸಿ, ಗೌರವಿಸಿದರು.
ನಂತರ ಮಾತನಾಡಿ, “ಕುಸುಗಲ್‌ನಂತಹ ಗ್ರಾಮೀಣ ಭಾಗದ ಹೆಣ್ಣುಮಗಳು ಜರ್ಮನಿಯಂತಹ ದೇಶದಲ್ಲಿ ನಮ್ಮ ತ್ರಿವರ್ಣ ಧ್ವಜವನ್ನು ಹಾರಿಸಿ, ಬೆಳ್ಳಿ ಪದಕ ಗೆಲ್ಲುವ ಮೂಲಕ ಇಡೀ ಭಾರತ ದೇಶಕ್ಕೇ ಕೀರ್ತಿ ತಂದಿದ್ದಾರೆ. ಇದು ನಮ್ಮೆಲ್ಲರಿಗೂ ಅತ್ಯಂತ ಹೆಮ್ಮೆಯ ವಿಷಯ. ಐಶ್ವರ್ಯ ಅವರ ಈ ಸಾಧನೆ ಇತರ ಯುವಕ-ಯುವತಿಯರಿಗೆ ಸ್ಫೂರ್ತಿದಾಯಕವಾಗಿದೆ. ಗ್ರಾಮೀಣ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಮತ್ತು ಪ್ರೋತ್ಸಾಹ ಸಿಕ್ಕರೆ ಅವರು ಅಂತಾರಾಷ್ಟಿçÃಯ ಮಟ್ಟದಲ್ಲಿ ಸಾಧನೆ ಮಾಡಬಲ್ಲರು ಎಂಬುದಕ್ಕೆ ಐಶ್ವರ್ಯ ಅವರೇ ಸಾಕ್ಷಿ” ಎಂದು ಶ್ಲಾಘಿಸಿದರು.
ವೀರಣ್ಣ ಕಲ್ಲೂರ, ರಾಜಣ್ಣ ಪವಾರ, ರವಿಚಂದ್ರ ಬಾಲೆಹೊಸೂರ, ಶ್ರೀಮತಿ ಅಮೃತಾ ಸ. ಡಂಗನವರ ಮತ್ತಿತರರು ಉಪಸ್ಥಿತರಿದ್ದರು.




























