
ಗದಗ,ಸೆ ೧೦: ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬವನ್ನು ಶಾಂತಿಯುತವಾಗಿ, ಸುವ್ಯವಸ್ಥಿತವಾಗಿ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸುವ ಉದ್ದೇಶದಿಂದ ಪ್ರತಿ ತಾಲೂಕುಗಳ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಏಕ ಗವಾಕ್ಷಿ ಸಮಿತಿಗಳನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ತಿಳೀಸಿದ್ದಾರೆ.
ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ವಿಗ್ರಹ ಪ್ರತಿಷ್ಠಾಪನೆ ಹಾಗೂ ನಂತರ ಮೆರವಣಿಗೆ ಮೂಲಕ ವಿಸರ್ಜನಾ ಕಾರ್ಯಕ್ರಮಗಳು ನಡೆಯಲಿರುವ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆಯೊಂದಿಗೆ ಅಗ್ನಿಶಾಮಕ ಇಲಾಖೆ, ಲೋಕೋಪಯೋಗಿ ಇಲಾಖೆ, ವಿದ್ಯುತ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ನಗರ/ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಹಾಗೂ ಕಂದಾಯ ಇಲಾಖೆಗಳನ್ನು ಒಳಗೊಂಡAತೆ ಏಕ ಗವಾಕ್ಷಿ ಸಮಿತಿಯನ್ನು ರಚಿಸಲಾಗಿದೆ.
ಏಕ ಗವಾಕ್ಷಿ ಸಮಿತಿಗೆ ಸಂಬAಧಪಟ್ಟ ಪೋಲಿಸ್ ಠಾಣೆಯ ಆರಕ್ಷಕ ಉಪ ನೀಕ್ಷಕರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ತಾಲೂಕಿನ ತಹಶೀಲ್ದಾರರು ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ವಿವಿಧ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಗಣೇಶೋತ್ಸವಕ್ಕೆ ಸಂಬAಧಿಸಿದ ಅರ್ಜಿಗಳನ್ನು ತ್ವರಿತವಾಗಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಿವೆ.
ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಸಲ್ಲಿಕೆಯಾಗುವ ಅರ್ಜಿಗಳಿಗೆ ಸಂಬAಧಿಸಿದ ಇಲಾಖೆಗಳು ತಮ್ಮ ಅಭಿಪ್ರಾಯವನ್ನು ನೀಡಿ, ಅರ್ಜಿ ಸ್ವೀಕರಿಸಿದ ೨೪ ಗಂಟೆಗಳೊಳಗಾಗಿ ಅರ್ಜಿದಾರರಿಗೆ ಪರವಾನಿಗೆ ನೀಡುವಂತೆ ಕ್ರಮವಹಿಸಲಾಗುವುದು.
ಸಮಿತಿಯ ಸದಸ್ಯ ಇಲಾಖೆಗಳು ಪರಸ್ಪರ ನಿರಂತರ ಸಂಪರ್ಕದಲ್ಲಿದ್ದು, ಹಬ್ಬದ ಸಂದರ್ಭದಲ್ಲಿ ತಮ್ಮ ಕೇಂದ್ರ ಸ್ಥಾನಗಳಲ್ಲಿ ಹಾಜರಿದ್ದು ಕಡ್ಡಾಯವಾಗಿ ಕರ್ತವ್ಯ ನಿರ್ವಹಿಸಬೇಕು. ಗಣೇಶೋತ್ಸವಕ್ಕೆ ಪರವಾನಿಗೆ ನೀಡುವ ಮೊದಲು ಆಯೋಜಕರಿಂದ ನ್ಯಾಯಾಲಯದ ನಿರ್ದೇಶನಗಳು ಹಾಗೂ ಸರ್ಕಾರದ ವಿವಿಧ ಇಲಾಖೆಗಳು ಕಾಲಕಾಲಕ್ಕೆ ನೀಡಿರುವ ಸೂಚನೆಗಳನ್ನು ಪಾಲಿಸುವ ಕುರಿತು ಮುಚ್ಚಳಿಕೆ ಪಡೆಯಬೇಕು. ಜೊತೆಗೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಕುರಿತು ಸಹ ಆಯೋಜಕರಿಂದ ಖಾತರಿಯನ್ನು ಪಡೆಯಬೇಕು.
.
ಸಾರ್ವಜನಿಕ ಸುರಕ್ಷತೆ ಹಾಗೂ ಪರಿಸರ ಮಾಲಿನ್ಯ ಉಂಟಾಗದ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸುವಂತೆ ಆಯೋಜಕರಿಗೆ ಸೂಚಿಸಲಾಗುವುದು. ಅಗತ್ಯವಿರುವ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳುಬೇಕು.
ವಿಶೇಷವಾಗಿ ಹೈ-ಟೆನ್ಶನ್ ವಿದ್ಯುತ್ ತಂತಿಗಳು ಹಾದುಹೋಗಿರುವ ಪ್ರದೇಶಗಳಲ್ಲಿ ಯಾವುದೇ ಕಾರಣಕ್ಕೂ ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಅನುಮತಿ ನೀಡಬಾರದು.
ಅದೇ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ವಿಗ್ರಹ ಪ್ರತಿಷ್ಠಾಪಿಸುವ ಸಂಘ-ಸAಸ್ಥೆಗಳು ಸ್ಥಳೀಯ ಸಂಸ್ಥೆ ಹಾಗೂ ಪೊಲೀಸ್ ಇಲಾಖೆಯಿಂದ ಅಗತ್ಯ ಅನುಮತಿಗಳನ್ನು ಪಡೆದುಕೊಂಡ ನಂತರವೇ ವಿಗ್ರಹ ಪ್ರತಿಷ್ಠಾಪಿಸಬೇಕು.
ಕೋಮು ಸೌಹಾರ್ದ ಸಭೆಗಳಿಗೆ ಕ್ರಮ: ಗಣೇಶೋತ್ಸವಕ್ಕೂ ಮುನ್ನ ನಾಗರಿಕ ಸಮಿತಿ, ಮೊಹಲ್ಲಾ ಸಮಿತಿ, ಕಾವಲು ಸಮಿತಿ ಸೇರಿದಂತೆ ವಿವಿಧ ಸಂಘ-ಸAಸ್ಥೆಗಳ ಮುಖಂಡರನ್ನು ಒಳಗೊಂಡAತೆ ಕೋಮು ಸೌಹಾರ್ದ ಸಭೆಗಳನ್ನು ಆಯೋಜಿಸಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.
ಗಣೇಶೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರು, ಸಂಘ-ಸAಸ್ಥೆಗಳು ಹಾಗೂ ಆಯೋಜಕರು ಆಡಳಿತ ಮತ್ತು ಪೊಲೀಸ್ ಇಲಾಖೆ ನೀಡುವ ಎಲ್ಲ ಮಾರ್ಗಸೂಚಿ ಹಾಗೂ ಮಾನ್ಯ ಉಚ್ಚ ನ್ಯಾಯಾಲಯದ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸಿ, ಶಾಂತಿಯುತವಾಗಿ ಹಬ್ಬ ಆಚರಿಸಲು ಸಹಕರಿಸುವಂತೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.































