Home ಜಿಲ್ಲೆ ಎಸ್‍ಐಆರ್ ಮಹಾ ಸಂಪರ್ಕ ಅಭಿಯಾನ: ಕಮಲನಗರ ಪಟ್ಟಣದಲ್ಲಿ ಶಾಸಕ ಪ್ರಭು ಚವ್ಹಾಣರಿಂದ ಜನಜಾಗೃತಿ

ಎಸ್‍ಐಆರ್ ಮಹಾ ಸಂಪರ್ಕ ಅಭಿಯಾನ: ಕಮಲನಗರ ಪಟ್ಟಣದಲ್ಲಿ ಶಾಸಕ ಪ್ರಭು ಚವ್ಹಾಣರಿಂದ ಜನಜಾಗೃತಿ

ಕಮಲನಗರ:ಎಸ್‍ಐಆರ್ ಮಹಾ ಸಂಪರ್ಕ ಅಭಿಯಾನದ ನಿಮಿತ್ತ ಔರಾದ(ಬಿ) ಶಾಸಕರು ಹಾಗೂ ಮಾಜಿ ಸಚಿವರಾದ ಪ್ರಭು ಬಿ. ಚವ್ಹಾಣ ಅವರು ಭಾನುವಾರ ಕಮಲನಗರ ಪಟ್ಟಣದ ವಿವಿಧ ವಾರ್ಡ್‍ಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಎಸ್‍ಐಆರ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕುಟುಂಬದ ಸದಸ್ಯರೊಂದಿಗೆ ಸಂವಾದ ನಡೆಸಿದ ಅವರು, ನಿಮ್ಮ ಮನೆಯಲ್ಲಿ ಎಷ್ಟು ಜನರಿದ್ದಾರೆ? ಎಷ್ಟು ಎನ್ಯುಮರೇಷನ್ ಅರ್ಜಿಗಳನ್ನು ಭರ್ತಿ ಮಾಡಿದ್ದೀರಿ? ಆನ್‍ಲೈನ್‍ನಲ್ಲಿ ಎಂಟ್ರಿ ಆಗಿದೆಯೇ? ಫಾರ್ಮ್ ಭರ್ತಿ ಅಥವಾ ಸಲ್ಲಿಕೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಇದೆಯೇ? ಎಂದು ವಿಚಾರಿಸಿ ಮಾಹಿತಿ ಪಡೆದರು. ಜನರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೇ ಅಗತ್ಯ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‍ಐಆರ್) ಪ್ರಕ್ರಿಯೆಯ ಮಹತ್ವವನ್ನು ವಿವರಿಸಿದ ಅವರು, ಅರ್ಹ ಪ್ರತಿಯೊಬ್ಬ ಮತದಾರರು ಎನ್ಯುಮರೇಷನ್ ಫಾರ್ಮ್ ಅನ್ನು ತಪ್ಪದೇ ಭರ್ತಿ ಮಾಡಿ ನಿಗದಿತ ಅವಧಿಯೊಳಗೆ ಸಲ್ಲಿಸುವಂತೆ ಮನವಿ ಮಾಡಿದರು.

ಸಂಚಾರದ ವೇಳೆ ಅನೇಕ ಮನೆಗಳಲ್ಲಿ ಎಸ್‍ಐಆರ್ ಎನ್ಯುಮರೇಷನ್ ಫಾರ್ಮ್‍ಗಳನ್ನು ಪಡೆದು ಅವುಗಳನ್ನು ಭರ್ತಿ ಮಾಡದೇ ಹಾಗೆಯೇ ಇಟ್ಟುಕೊಂಡಿರುವುದು ಗಮನಕ್ಕೆ ಬಂದಿದೆ. ಇಂತಹ ಮತದಾರರು ವಿಳಂಬ ಮಾಡದೇ ಫಾರ್ಮ್‍ಗಳನ್ನು ಸಂಪೂರ್ಣವಾಗಿ ಭರ್ತಿ ಮಾಡಿ, ನಿಗದಿತ ಅವಧಿಯೊಳಗೆ ತಮ್ಮ ವ್ಯಾಪ್ತಿಯ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎ???) ಸಲ್ಲಿಸಬೇಕು ಎಂದು ಅವರು ತಿಳಿಸಿದರು.

ಫಾರ್ಮ್ ಭರ್ತಿ ಮಾಡುವಲ್ಲಿ ಯಾವುದೇ ಗೊಂದಲ ಅಥವಾ ಸಮಸ್ಯೆ ಎದುರಾದರೆ ಬಿಎ???ಗಳು, ಸಂಬಂಧಿತ ಅಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರ ಸಹಾಯ ಪಡೆಯುವಂತೆ ಸಲಹೆ ನೀಡಿದ ಅವರು, ಬಿಎ??? ಹಾಗೂ ಬಿಎ???-2ಗಳು ಮನೆ ಮನೆಗೆ ಭೇಟಿ ನೀಡಿ ಪ್ರತಿಯೊಂದು ಅರ್ಜಿಯೂ ಸಲ್ಲಿಕೆಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.

ಮತದಾರರ ಹಕ್ಕುಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಎಸ್‍ಐಆರ್ ಅಭಿಯಾನ ಅತ್ಯಂತ ಮಹತ್ವದ್ದಾಗಿದ್ದು, ಈ ಅವಕಾಶವನ್ನು ಕಳೆದುಕೊಂಡರೆ ಮುಂದಿನ ದಿನಗಳಲ್ಲಿ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇದೆ. ಆದ್ದರಿಂದ ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕಿನ ಪ್ರತಿಯೊಬ್ಬ ಅರ್ಹ ಮತದಾರರು ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ತಮ್ಮ ಎನ್ಯುಮರೇಷನ್ ಫಾರ್ಮ್‍ಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ರಾಮಶೆಟ್ಟಿ ಪನ್ನಾಳೆ, ಮುಖಂಡರಾದ ಶಿವಾಜಿರಾವ ಪಾಟೀಲ ಮುಂಗನಾಳ, ಬಸವರಾಜ ಪಾಟೀಲ್, ರಂಗಾರಾವ ಜಾಧವ, ಶಿವಕುಮಾರ ವಡ್ಡೆ, ಶಿವು ಝುಲ್ಪೆ, ಪ್ರವೀಣ ಕಾರಬಾರಿ, ಭರತ ಕದಂ, ವಿಜಯಲಕ್ಷ್ಮಿ ಕೌಟಗೆ, ಬಂಟಿ ರಾಂಪೂರೆ ಸೇರಿದಂತೆ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.