Home ಜಿಲ್ಲೆ ಜಮಖಂಡಿ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ಪೂರ್ಣ: ಅಂತಿಮ ಮತದಾರರ ಪಟ್ಟಿಯಲ್ಲಿ ೧,೯೫,೯೩೧ ಮತದಾರರು

ಜಮಖಂಡಿ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ಪೂರ್ಣ: ಅಂತಿಮ ಮತದಾರರ ಪಟ್ಟಿಯಲ್ಲಿ ೧,೯೫,೯೩೧ ಮತದಾರರು

ಸಂಜೆ ವಾಣಿ ವಾರ್ತೆ |
ಜಮಖಂಡಿ: ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಕ್ಟೋಬರ್ ೨೭ರಂದು ಪ್ರಕಟಿಸಲಾದ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು ೧,೯೫,೯೩೧ ಮತದಾರರು ದಾಖಲಾಗಿದ್ದಾರೆ ಎಂದು ಉಪವಿಭಾಗಾಧಿಕಾರಿ ಶ್ವೇತಾ ಬೇಡಿಕರ ತಿಳಿಸಿದರು.
ನಗರದ ತಾಲೂಕು ಆಡಳಿತ ಸೌಧದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್ ಪ್ರಕ್ರಿಯೆಯಡಿ ಮತದಾರರ ಪಟ್ಟಿಯನ್ನು ಸಮಗ್ರವಾಗಿ ಪರಿಶೀಲಿಸಿ, ಅರ್ಹ ಮತದಾರರನ್ನು ಸೇರ್ಪಡೆಗೊಳಿಸುವ ಹಾಗೂ ವಿವಿಧ ಕಾರಣಗಳಿಂದ ಅನರ್ಹರಾದವರ ಹೆಸರುಗಳನ್ನು ಕೈಬಿಡುವ ಕಾರ್ಯ ಕೈಗೊಳ್ಳಲಾಗಿದೆ ಎಂದರು.
ಅAತಿಮ ಪಟ್ಟಿಯಲ್ಲಿ ೧,೯೫,೯೩೧ ಮತದಾರರುಜಮಖಂಡಿ ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯಲ್ಲಿ ೯೭,೮೭೫ ಪುರುಷರು ಹಾಗೂ ೯೮,೦೪೮ ಮಹಿಳೆಯರು ಸೇರಿದಂತೆ ಒಟ್ಟು ೧,೯೫,೯೩೧ ಮತದಾರರಿದ್ದಾರೆ ಎಂದು ಮಾಹಿತಿ ನೀಡಿದರು.
ಎಸ್‌ಐಆರ್ ಪ್ರಕ್ರಿಯೆ ಆರಂಭಕ್ಕೂ ಮುನ್ನ ಕ್ಷೇತ್ರದಲ್ಲಿ ೨,೩೦,೦೦೬ ಮತದಾರರಿದ್ದರು. ಮನೆಮನೆಗೆ ಎನ್ಯೂಮರೇಷನ್ ಫಾರ್ಮ್ಗಳನ್ನು ವಿತರಿಸಿ, ಮರಳಿ ಪಡೆದು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಮೃತಪಟ್ಟವರು, ಶಾಶ್ವತವಾಗಿ ಸ್ಥಳಾಂತರಗೊAಡವರು ಹಾಗೂ ಇತರ ಕಾರಣಗಳಿಂದ ಮತದಾರರ ಪಟ್ಟಿಯಲ್ಲಿ ಹೆಸರು ಮುಂದುವರಿಸಲು ಅರ್ಹರಲ್ಲದವರನ್ನು ಗುರುತಿಸಲಾಯಿತು. ಈ ಪ್ರಕ್ರಿಯೆಯ ಆರಂಭಿಕ ಹಂತದಲ್ಲಿ ೩೬,೭೩೯ ಮತದಾರರ ಹೆಸರುಗಳನ್ನು ಕೈಬಿಡುವ ಪ್ರಕ್ರಿಯೆ ಕೈಗೊಳ್ಳಲಾಗಿತ್ತು ಎಂದು ವಿವರಿಸಿದರು.
ವಿಚಾರಣೆಯ ಬಳಿಕ ೭೩ ಹೆಸರುಗಳಷ್ಟೇ ಕೈಬಿಡುವ ನಿರ್ಧಾರಪರಿಶೀಲನೆಯ ನಂತರ ೨,೫೬೪ ಮತದಾರರನ್ನು ದಾಖಲೆಗಳ ಪರಿಶೀಲನೆ ಹಾಗೂ ವಿಚಾರಣೆಗೆ ಕರೆಯಲಾಗಿತ್ತು. ಸಂಬAಧಿತ ಮತದಾರರು ಅಗತ್ಯ ದಾಖಲೆಗಳನ್ನು ಸಲ್ಲಿಸಿ, ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಉಳಿಸಿಕೊಳ್ಳಲು ಅವಕಾಶ ಪಡೆದರು. ವಿಚಾರಣೆಯ ಬಳಿಕ ಅಂತಿಮ ಹಂತದಲ್ಲಿ ಸುಮಾರು ೭೩ ಮತದಾರರ ಹೆಸರುಗಳನ್ನು ಮಾತ್ರ ಕೈಬಿಡಲಾಗಿದ್ದು, ಇವರಲ್ಲಿ ಮೃತಪಟ್ಟವರು ಹಾಗೂ ಶಾಶ್ವತವಾಗಿ ಸ್ಥಳಾಂತರಗೊAಡವರು ಸೇರಿದ್ದಾರೆ ಎಂದು ಶ್ವೇತಾ ಬೇಡಿಕರ ತಿಳಿಸಿದರು.
ಆಗಸ್ಟ್ ೨೪ರಂದು ಪ್ರಕಟಿಸಲಾದ ಕರಡು ಮತದಾರರ ಪಟ್ಟಿಯಲ್ಲಿ ೧,೯೩,೨೬೭ ಮತದಾರರಿದ್ದರು. ಪರಿಶೀಲನೆ, ವಿಚಾರಣೆ ಹಾಗೂ ಹೊಸ ಮತದಾರರ ಸೇರ್ಪಡೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅಂತಿಮ ಪಟ್ಟಿಯಲ್ಲಿ ೧,೯೫,೯೩೧ ಮತದಾರರು ದಾಖಲಾಗಿದ್ದಾರೆ ಎಂದರು.
೩,೩೧೨ ಹೊಸ ಮತದಾರರ ಸೇರ್ಪಡೆಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ತಾಲೂಕು ಆಡಳಿತದ ವತಿಯಿಂದ ವ್ಯವಸ್ಥಿತವಾಗಿ ಸ್ವೀಪ್ ಚಟುವಟಿಕೆಗಳನ್ನು ನಡೆಸಲಾಗಿದೆ. ಇದರ ಫಲವಾಗಿ ೩,೩೧೨ ಹೊಸ ಮತದಾರರನ್ನು ಸೇರ್ಪಡೆಗೊಳಿಸಲಾಗಿದೆ ಎಂದು ತಿಳಿಸಿದರು.
ಎಸ್‌ಐಆರ್ ಪ್ರಕ್ರಿಯೆಯುದ್ದಕ್ಕೂ ಬೂತ್ ಮಟ್ಟದ ಅಧಿಕಾರಿಗಳು, ವಿವಿಧ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು ಹಾಗೂ ಸಾರ್ವಜನಿಕರಿಂದ ಉತ್ತಮ ಸಹಕಾರ ದೊರೆತಿದೆ. ಎನ್ಯೂಮರೇಷನ್ ಫಾರ್ಮ್ಗಳ ವಿತರಣೆ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ಮಾಧ್ಯಮ ಮಿತ್ರರು ಪ್ರಮುಖ ಪಾತ್ರ ವಹಿಸಿದ್ದಾರೆ. ಇದಕ್ಕಾಗಿ ಮಾಧ್ಯಮ ಪ್ರತಿನಿಧಿಗಳಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು.
ಅAತಿಮ ಮತದಾರರ ಪಟ್ಟಿಯ ಪ್ರತಿಯನ್ನು ರಾಜಕೀಯ ಪಕ್ಷಗಳ ಮುಖಂಡರಿಗೂ ನೀಡಲಾಗುತ್ತಿದ್ದು, ಅವರು ತಮ್ಮ ಹಂತದಲ್ಲಿ ಪಟ್ಟಿಯನ್ನು ಪರಿಶೀಲಿಸಬಹುದು ಎಂದು ಹೇಳಿದರು.ಪಾರದರ್ಶಕವಾಗಿ ಪ್ರಕ್ರಿಯೆ ಪೂರ್ಣ: ತಹಶೀಲ್ದಾರ್ ಅನೀಲ ಬಡಗೇರ
ತಹಶೀಲ್ದಾರ್ ಅನೀಲ ಬಡಗೇರ ಮಾತನಾಡಿ, ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯಲ್ಲಿನ ಒಟ್ಟು ಮತದಾರರ ಸಂಖ್ಯೆ, ಕೈಬಿಡಲಾದ ಹೆಸರುಗಳು, ಹೊಸದಾಗಿ ಸೇರ್ಪಡೆಗೊಂಡ ಯುವ ಮತದಾರರು ಹಾಗೂ ಪುರುಷ ಮತ್ತು ಮಹಿಳಾ ಮತದಾರರ ಅಂಕಿ-ಅAಶಗಳನ್ನು ಮಾಧ್ಯಮಗಳೊಂದಿಗೆ ಹಂಚಿಕೊಳ್ಳುವ ಉದ್ದೇಶದಿಂದ ಪತ್ರಿಕಾಗೋಷ್ಠಿ ಆಯೋಜಿಸಲಾಗಿದೆ ಎಂದರು.
ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಹಕರಿಸಿದ ಅಧಿಕಾರಿಗಳು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಸಾರ್ವಜನಿಕರು ಹಾಗೂ ಮಾಧ್ಯಮ ಮಿತ್ರರಿಗೆ ತಾಲೂಕು ಆಡಳಿತದ ಪರವಾಗಿ ಧನ್ಯವಾದಗಳನ್ನು ತಿಳಿಸಿದರು.