ಅಂಬೇಡ್ಕರ್ ಭವನಕ್ಕೆ ನಿವೇಶನ: ಸೂಕ್ತ ಕ್ರಮಕ್ಕೆ ಸೂಚನೆ

ಬೀದರ್: ಜೂ.೩೦:ಜಿಲ್ಲಾ ಕೇಂದ್ರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣಕ್ಕೆ ನಿವೇಶನ ಒದಗಿಸುವ ಬೇಡಿಕೆ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಸೂಚಿಸಿದ್ದಾರೆ.
ತಾಲ್ಲೂಕಿನ ಹಮಿಲಾಪುರದ ದಿ ಬುದ್ಧ ಯುಥ್ ಕ್ಲಬ್ ಅಧ್ಯಕ್ಷ ಮಹೇಶ ಎಸ್. ರಾಂಪುರೆ ಅವರ ಮನವಿಯ ಹಿನ್ನೆಲೆಯಲ್ಲಿ ಅವರು ಈ ಕುರಿತು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.
ಬೇಡಿಕೆ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಅವಶ್ಯವಿದ್ದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಮಹೇಶ ರಾಂಪುರೆ ಅವರು ನಗರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣಕ್ಕೆ ೪ ಎಕರೆ ಜಮೀನು ಒದಗಿಸುವಂತೆ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದರು.