
ಯಾದಗಿರಿ:ಜೂ.೪: ಮುಖ್ಯಮಂತ್ರಿಗಳು ಇದೇ ಜೂನ್ ೧೪ ಕ್ಕೆ ಯಾದಗಿರಿಗೆ ಭೇಟಿ ನೀಡುವ ಪ್ರಯುಕ್ತ ಇಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಶ್ರೀ ಶರಣಬಸಪ್ಪ ದರ್ಶನಾಪುರ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷರಾದ ಶ್ರೀ ಅಜಯ್ ಧರ್ಮಸಿಂಗ್ ಅವರು ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿರುವ ಜಿಲ್ಲಾ. ಕ್ರೀಡಾಂಗಣದಲ್ಲಿ ಸ್ಥಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ,ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ್, ಸುರಪುರ ಶಾಸಕ ರಾಜಾ ವೇಣುಗೋಪಾಲ್ ನಾಯಕ, ಕೆಕೆಆರ್ ಡಿ ಬಿ ಕಾರ್ಯದರ್ಶಿ ಎಮ್,ಸುಂದರೇಶ್ ಬಾಬು, ಜಿಲ್ಲಾಧಿಕಾರಿ ಡಾ. ಸುಶೀಲಾ.ಬಿ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ,ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.