ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ

ಕೋಲಾರ, ಸೆ.೧೨-ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಆಗಸ್ಟ್ ೨೩ ರಿಂದ ಆರಂಭಿಸಿದ್ದು, ವಿದ್ಯುತ್ ಮೀಟರ್ ರೀಡರುಗಳು ಎಲ್ಲ ಮನೆಗಳನ್ನು ಜಿಯೋಟ್ಯಾಗಿಂಗ್ ಮಾಡುವ ಕಾರ್ಯ ಪ್ರಾರಂಭಿಸಿದ್ದು, ಜಿಲ್ಲೆಯಲ್ಲಿ ಆದಷ್ಟು ಬೇಗ ಯಶಸ್ವಿಯಾಗಿ ಈ ಕಾರ್ಯಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.


ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುವ ಕುರಿತು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಎಲ್ಲಾ ವಾಸದ ಮನೆಗಳಿಗೆ ವಿದ್ಯುತ್ ಸಂಪರ್ಕವಿರುವ ಬಗ್ಗೆ ಖಾತ್ರಿ ಪಡಿಸಿಕೊಂಡು, ವಾಸದ ಮನೆಗಳ ಆರ್. ಆರ್. ಮೀಟರ್ ಆಧಾರದ ಮೇಲೆ ಮನೆಗಳನ್ನು ಗುರುತಿಸಿ ಅಲ್ಲಿರುವ ಜನರ ಸಮೀಕ್ಷೆ ಮಾಡಿ, ಯಾವುದೇ ಮನೆಗಳು ಸಮೀಕ್ಷಾ ವ್ಯಾಪ್ತಿಯಿಂದ ತಪ್ಪಿ ಹೋಗದಂತೆ ನಿಗಾ ವಹಿಸಬೇಕು. ಮೀಟರ್ ನಂಬರ ಇಲ್ಲದ ಅಲೆಮಾರಿ,ಅರೆ ಅಲೆಮಾರಿ ವಾಸಸ್ಥಳ ಮತ್ತು ಕೊಳಚೆ ಪ್ರದೇಶಗಳ, ಅರಣ್ಯ ಪ್ರದೇಶಗಳ ಪ್ರತಿ ಕುಟುಂಬದ ನಂಬರ್ ಆಪಷನ್ ನಲ್ಲಿ UಊIಆ ಸೃಜಿಸಬೇಕು. ಸಂಬಂಧಿಸಿದ ಅಧಿಕಾರಿಗಳು ಈ ಕಾರ್ಯ ಅಚ್ಚುಕಟ್ಟಾಗಿ ನಿರ್ವಹಿಸಲು ಅವರು ಸೂಚಿಸಿದರು.


ಅದರಂತೆ ಎನ್. ಎಸ್. ಎಸ್ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರ ಮೂಲಕ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಕುರಿತು ಸೂಕ್ತ ಅರಿವು ಮೂಡಿಸಬೇಕು. ಸಂಬಂಧಿಸಿದ ನೋಡಲ್ ಅಧಿಕಾರಿಗಳು ಈ ಕುರಿತು ಮೇಲುಸ್ತುವಾರಿ ನೋಡಿಕೊಳ್ಳಲು ಹಾಗೂ ಗ್ರಾಮೀಣ ಹಾಗೂ ನಗರ ಸ್ಥಳಗಳಲ್ಲಿ ಕಸ ವಿಲೇವಾರಿ ವಾಹನದ ಮೂಲಕ
ಆಡಿಯೋ ಕ್ಲಿಪ್ ಮೂಲಕ ಜಾಗೃತಿ ಮೂಡಿಸಬೇಕು. ಗ್ರಾಮೀಣ ಪ್ರದೇಶದ ಜವಾಬ್ದಾರಿಯನ್ನು ಆಯಾ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು,ಪಿಡಿಓ ಗಳು ಹಾಗೂ ನಗರ ಪ್ರದೇಶಗಳಲ್ಲಿ ಪಿ.ಡಿ.ಡಿಯುಡಿಸಿ ಅವರು ಜವಾಬ್ದಾರಿ ವಹಿಸಿಕೊಳ್ಳಲು ಅವರು ಸೂಚಿಸಿದರು.


ತಹಶೀಲ್ದಾರ್‌ರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಪಿ.ಡಿ ಡಿಯುಡಿಸಿ ಹೆಚ್ಚು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.


ಸಮೀಕ್ಷೆದಾರರಿಗೆ /ಗಣತಿದಾರರಿಗೆ/ಶಿಕ್ಷಕರಿಗೆ ಕ್ಲಸ್ಟರ್ ವೈಸ್ ತರಬೇತಿ ಕುರಿತು ಮೈಕ್ರೋ ಪ್ಲಾನ್ ಸಿದ್ದಪಡಿಸಿ ವ್ಯವಸ್ಥಿತ ರೀತಿಯಲ್ಲಿ ತರಬೇತಿ ಹಮ್ಮಿಕೊಳ್ಳಬೇಕು. ಮಾಸ್ಟರ್ ಟ್ರೈನರ್ಸ, ಗಣತಿದಾರರು, ಮೇಲ್ವಿಚಾರಕರ ಸಮಗ್ರ ಅಂಕಿ ಅಂಶಗಳನ್ನು ಸಿದ್ದವಾಗಿಟ್ಟುಕೊಂಡು, ತಾಲೂಕು ಮಟ್ಟದ ಸಮನ್ವಯ ಸಮಿತಿ ಸದಸ್ಯರು ಕೂಡ ಅವಶ್ಯಕ ಸಿದ್ಧತೆ ಮಾಡಿಕೊಳ್ಳುವಂತೆ ನೋಡಿಕೊಳ್ಳಲು ಅವರು ಸೂಚಿಸಿ, ಈಗ ನಡೆಯುತ್ತಿರುವ ಜಿಯೋಟ್ಯಾಗ್, ಸರ್ವೆ ಕಾರ್ಯ ಬಗ್ಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.


ಅದರಂತೆ ಗಣತಿದಾರರಿಗೆ ಡಿಡಿಪಿಐ ಮೂಖಾಂತರ ಸೂಕ್ತ ತರಬೇತಿ ಹಮ್ಮಿಕೊಳ್ಳಲು ಅವರು ಸೂಚನೆ ನೀಡಿದರು.


ಎರಡನೇಯ ಹಂತದ ಸಮೀಕ್ಷೆಯ ಕಾರ್ಯವನ್ನು ದಸರಾ ರಜೆಯ ಅವಧಿಯಲ್ಲಿ ೨೨ ನೇ ಸೆಪ್ಟೆಂಬರ್ ನಿಂದ ೭ ನೇ ಅಕ್ಟೋಬರ್ ೨೦೨೫ ರವರೆಗೆ ನಡೆಸಲು ಗುರಿ ಹೊಂದಲಾಗಿದೆ.


ಪ್ರತಿ ಮನೆಗೂ ಸ್ಟಿಕ್ಕರ್ ಅಂಟಿಸಿ ಸಮೀಕ್ಷಾ ದಾರರಿಗೆ ಮನೆಯ ಗುರುತಿಸುವಿಕೆ ಸುಲಭವಾಗಲು ಸಾರ್ವಜನಿಕರು ಮತ್ತು ಪ್ರತಿಯೊಂದು ಕುಟುಂಬದ ಸದಸ್ಯರು [ವಿಶೇಷವಾಗಿ ಅಪಾಟೆಂಟ್ ಮತ್ತು ಕ್ಲಸ್ಟರ್ ವಾಸಸ್ಥಳಗಳಲ್ಲಿ ವಾಸಿಸುವವರು] ಮೀಟರ್ ರೀಡರ್ ಗಳಿಗೆ ವಹಿಸಲಾಗಿರುವ ಮನೆ ಪಟ್ಟಿ ಕೆಲಸವನ್ನು ಸುಗಮವಾಗಿ ಪೂರ್ಣಗೊಳಿಸು
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ. ಪ್ರವೀಣ್. ಪಿ. ಬಾಗೇವಾಡಿ,ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಬಿ. ನಿಖಿಲ್, ಸಹಾಯಕ ಆಯುಕ್ತೆ ಡಾ. ಹೆಚ್. ಪಿ. ಎಸ್. ಮೈತ್ರಿ, ಎಲ್ ತಹಸೀಲ್ದಾರ್, ಎಲ್ಲಾ ಬಿ ಈ ಓ, ಬೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರಾದ ಶೋಭಾ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗೀತಾ, ಸಂಖ್ಯೆಕ ಅಧಿಕಾರಿ ರಮೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.