ಬೆಂಗಳೂರು, ಸೆ. ೨೩- ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ ಜಿ ಅವರು ತಿಳಿಸಿದ್ದಾರೆ.
ಮನೆ ಮನೆಯ ಸಮೀಕ್ಷೆ ನಡೆಸಲು ಸಮೀಕ್ಷಾದಾರರು/ಗಣತಿದಾರರನ್ನು ಆಯಾ ಬ್ಲಾಕ್‌ಗಳಿಗೆ ಈಗಾಗಲೇ ನಿಯೋಜಿಸಲಾಗಿದ್ದು, ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ೧೨,೪೩,೦೦೦ ಕುಟುಂಬಗಳ ಸಮೀಕ್ಷೆಯು ಪ್ರಾರಂಭವಾಗಿದೆ ಎಂದು ಅವರು ತಿಳಿಸಿದರು.
ಈ ಸಮೀಕ್ಷೆಯ ಮುನ್ನ ಬೆಸ್ಕಾಂ ವಿದ್ಯುತ್ ಮೀಟರ್ ರೀಡರ್‌ಗಳ ಆರ್.ಆರ್.ನಂ ಮೂಲಕ ಮನೆಮನೆಗಳಿಗೆ ಭೇಟಿ ನೀಡಿ ಉeo ಣಚಿgiಟಿg ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದ್ದು, ಮನೆಗಳ ಪಟ್ಟಿಯ ಮಾಹಿತಿಯನ್ನು ಇಡಿಸಿಎಸ್ ಸರ್ವರ್‌ಗಳಲ್ಲಿ ಅಪಲೋಡ್ ಮಾಡಲಾಗಿದೆ.
ಈ ಂಠಿಠಿ ನಲ್ಲಿ ಕಾಲೋನಿಗಳು, ಅಪಾರ್ಟ್‌ಮೆಂಟ್ ಗಳು ಹಾಗೂ ವಾಸಸ್ಥಳಗಳನ್ನು ಗುರುತಿಸಲಾಗಿದ್ದು ಗಣತಿದಾರರು / ಸಮೀಕ್ಷಾದಾರರು ಪ್ರತಿ ಮನೆಗೆ ಭೇಟಿ ನೀಡಿ UಊIಆ ಸ್ಟಿಕ್ಕರ್‌ಗಳನ್ನು ಈಗಾಗಲೇ ಆಂಟಿಸಿರುತ್ತಾರೆ ಎಂದು ಅವರು ತಿಳಿಸಿದರು.
ಈ ಸಮೀಕ್ಷೆಯು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು, ಹಿಂದುಳಿದ ವರ್ಗಗಳ ಹಾಗೂ ಇತರೆ ಎಲ್ಲ ಜನರ ಸಾಮಾಜಿಕ, ಶೈಕ್ಷಣಿಕ ಮತ್ತು ದತ್ತಾಂಶವನ್ನು ಸಂಗ್ರಹಿಸಲು ಈ ಯೋಜನೆ ಸಹಕರಿಯಾಗಲಿದೆ.
ರಾಜ್ಯಾದ್ಯಂತ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಸಮಾನತೆಗಳನ್ನು ಹೋಗಲಾಡಿಸಲು ಯೋಜನೆಗಳನ್ನು ರೂಪಿಸಲು ಈ ದತ್ತಾಂಶ ಸಹಕರಿ ಯಾಗಲಿದೆ ಎಂದು ತಿಳಿಸಿದರು.
ಸಮೀಕ್ಷೆಯು ೬೦ ಪ್ರಶ್ನಾವಳಿಗಳನ್ನು ಹೊಂದಿದ್ದು, ಸಾರ್ವಜನಿಕರು ಈ ಸಮೀಕ್ಷೆಯಲ್ಲಿ ಭಾಗಿಯಾಗಿ ಸಮೀಕ್ಷೆಯನ್ನು ಯಶಸ್ವಿಗೊಳಿಸಲು ಸಹಕರಿಸಬೇಕೆಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.
































