Home ಜಿಲ್ಲೆ ಕಾಂಗ್ರೆಸ್ ನಿಂದ ಸಾಮಾಜಿಕ ನ್ಯಾಯ

ಕಾಂಗ್ರೆಸ್ ನಿಂದ ಸಾಮಾಜಿಕ ನ್ಯಾಯ

ಬೀದರ್: ಕಾಂಗ್ರೆಸ್ ಪಕ್ಷವು ಜಿಲ್ಲಾ ಘಟಕಗಳ ಅಧ್ಯಕ್ಷರ ನೇಮಕದಲ್ಲಿ ಎಲ್ಲ
ಸಮದಾಯಗಳಿಗೂ ಸಾಮಾಜಿಕ ನ್ಯಾಯ ಕಲ್ಪಿಸಿದೆ ಎಂದು ಕಾಂಗ್ರೆಸ್ ಸಹಕಾರ ವಿಭಾಗದ ರಾಜ್ಯ
ಅಧ್ಯಕ್ಷ ಧನರಾಜ ತಾಳಂಪಳ್ಳಿ ಪ್ರತಿಕ್ರಿಯಿಸಿದ್ದಾರೆ.
ಪಕ್ಷದ ರಾಜ್ಯ ಅಧ್ಯಕ್ಷರು ಎಲ್ಲ ರೀತಿಯಿಂದಲೂ ಸಮರ್ಥರಾದ ಅಭ್ಯರ್ಥಿಗಳಿಗೆ ಜಿಲ್ಲಾ
ಘಟಕಗಳ ಹೊಣೆ ವಹಿಸಿದ್ದಾರೆ ಎಂದು ತಿಳಿಸಿದ್ದಾರೆ.
ಬೀದರ್ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಅಲ್ಪಸಂಖ್ಯಾತ ಸಮುದಾಯದ ಅಬ್ದುಲ್ ಮನ್ನಾನ್ ಸೇಠ್
ಅವರನ್ನು ನೇಮಕ ಮಾಡಿರುವುದು ಅತ್ಯಂತ ಸೂಕ್ತವಾಗಿದೆ. ಮನ್ನಾನ್ ಸೇಠ್ ಅವರು ಪಕ್ಷ
ಹಿರಿಯ ಮುಖಂಡರಾಗಿದ್ದಾರೆ. ವಿವಿಧ ಹುದ್ದೆಗಳಲ್ಲಿ ಅತ್ಯುತ್ತಮವಾಗಿ ಕಾರ್ಯ
ನಿರ್ವಹಿಸಿದ್ದಾರೆ. ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ವಿಶೇಷ ಗುಣ
ಹೊಂದಿದ್ದಾರೆ ಎಂದು ಹೇಳಿದ್ದಾರೆ.
ಮನ್ನಾನ್ ಸೇಠ್ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು
ಬಲಗೊಳ್ಳಲಿದೆ. 2028 ರ ವಿಧಾನಸಭೆ ಚುನಾವಣೆಯಲ್ಲಿ ಎಲ್ಲ ಸ್ಥಾನಗಳನ್ನು ಗೆಲ್ಲಲಿದೆ
ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.